ಬೆಂಗಳೂರು:- ಇಂದು ದಕ್ಷಿಣ ಕನ್ನಡ ಜಿಲ್ಲೆಯಲಿಲಿ ಭಾರಿ ಮಳೆ ಆಗಲಿದ್ದು, ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ವ್ಯಾಪಕ ಸ್ಥಳಗಳಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಇರಲ್ಲ ಕರೆಂಟ್: ಎಲ್ಲೆಲ್ಲಿ ಗೊತ್ತಾ!?
ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು ಮತ್ತು ರಾಮನಗರ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗಲಿದೆ.
ಉತ್ತರ ಒಳನಾಡಿನ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಚದುರಿದಂತೆ ಮಧ್ಯಮ ಮಳೆಯಾಗಲಿದೆ.
ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.