ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ರಾತ್ರಿ ಭರ್ಜರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
2ಎ ಮೀಸಲಾತಿಗೆ ಆಗ್ರಹ: ಡಿ 10ಕ್ಕೆ ಬೆಳಗಾವಿ ಸುವರ್ಣಸೌಧಕ್ಕೆ 15,000 ಮಂದಿ ಮುತ್ತಿಗೆ!
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾದ ಫೆಂಗಲ್ ಸೈಕ್ಲೋನ್ ಇದು. ಈ ಚಂಡಮಾರುತ ತಮಿಳುನಾಡು ಮೂಲಕ ಕರ್ನಾಟಕದತ್ತ ಧಾವಿಸಿದೆ. ಇದರ ಪರಿಣಾಮ ಇಂದು ರಾತ್ರಿ ರಾಜ್ಯದ ಕರಾವಳಿ ಭಾಗದಲ್ಲಿ ಜೋರು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾತ್ರಿ 9 ಗಂಟೆ ಮೇಲೆ ಭಾರೀ ಮಳೆ ಸಾಧ್ಯತೆ ಇದೆ.
ಸಿಲಿಕಾನ್ ಸಿಟಿಯಲ್ಲಿ ಭರ್ಜರಿ ಮಳೆ
ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಚಂಡಮಾರುತ ಪರಿಣಾಮ ಬೆಂಗಳೂರಿನ ಮೇಲೂ ಹೆಚ್ಚು ಗೋಚರಿಸಲಿದ್ದು, ಗುಡುಗು ಸಮೇತ ಮಳೆ ಬೀಳಲಿದೆ ಎಂದು ತಿಳಿದು ಬಂದಿದೆ.
ಶಿವಮೊಗ್ಗ, ಉಡುಪಿ, ಮಂಡ್ಯ, ರಾಮನಗರ, ಧಾರವಾಡ, ಕೊಪ್ಪಳ, ಬಳ್ಳಾರಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಕೋಲಾರ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ವಿಜಯನಗರ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.