ಈ ಬಾರಿಯ ದಸರಾ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ.
ಯಶಸ್ಸಿನ ಹಾದಿ ತಲುಪಲು ಏನೂ ಮಾಡಬೇಕು? ‘ರತನ್ ಟಾಟಾ’ ನೀಡಿರುವ ಟಾಪ್ 10 ಮಾತುಗಳು ಇಲ್ಲಿವೆ.!
ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕದಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದೆ. ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಚಾರ್ಮಾಡಿ ಘಾಟ್ನಲ್ಲಿ ರಸ್ತೆಯಲ್ಲಿ ನೀರು ರಭಸದಿಂದ ಹರಿದು ಹೋಗುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.