ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ವಿದ್ಯುತ್ ಕಾಮಗಾರಿ: ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಇಂದು ಕರೆಂಟ್ ಕಟ್!
ಆ.22ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಉಳಿದ ಜಿಲ್ಲೆಗಳು ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಆ. 23ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಭಾರಿ ಮಳೆ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅದೇ ರೀತಿ
ಆ.24ರಂದು ಕೂಡ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಭಾರಿ ಮಳೆ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಆ.27ರವರೆಗೆ ಇರಲಿದೆ ಎಂದು ಮಾಹಿತಿ ನೀಡಿದೆ.
ಗಾಳಿಯ ವೇಗ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ 55 ಕಿ.ಮೀ ವರೆಗೆ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಚಾಲ್ತಿಯಲ್ಲಿರುವ ಸಾಧ್ಯತೆಯಿದೆ
ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31° C ಮತ್ತು 22° C ಆಗಿರಬಹುದು