ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ದಕ್ಷಿಣ ಕನ್ನಡ, ಉಡುಪಿ, ಚಾಮಾರಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ
ಇಂದಿನಿಂದ ಚಳಿ ಹೆಚ್ಚಾಗಿದೆ. ವಿಜಯಪುರದಲ್ಲಿ 15 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಶೃಂಗೇರಿ, ಕೋಲಾರದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 26.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ