ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
PMKSY: ರೈತರೇ ಗಮನಿಸಿ.. “ಕೃಷಿ ಸಿಂಚಾಯಿ ಯೋಜನೆ”ಯಡಿಯಲ್ಲಿ ನಿಮಗೆ ಸಿಗಲಿದೆ ಶೇ. 90 ರಷ್ಟು ಸಹಾಯ ಧನ!
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಇಂದು ಒಣಹವೆ ಇರಲಿದ್ದು, ನವೆಂಬರ್ 9ರಂದು ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 20.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.