ಬೆಂಗಳೂರು:- ಕರ್ನಾಟಕದ ಹಲವೆಡೆ ಈ ವಾರವೂ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ಕೊಟ್ಟಿದೆ.
ಕರಾವಳಿಯ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯ ವೇಗವು (30-40 kmph) ತಲುಪುವ ಸಾಧ್ಯತೆಯಿದೆ. ಹಾಗೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಾಳಿಯ ವೇಗ (30-40 kmph) ತಲುಪುವ ಸಾಧ್ಯತೆಯಿದೆ ಹಾಗೊ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳೀಯ ಮುನ್ಸೂಚನೆ ಮುಂದಿನ 24 ಗಂಟೆಗಳ ಕಾಲದ ಹವಾಮಾನ ಮುನ್ಸೂಚನೆ ಹೀಗಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗವು (40-50 kmph) ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ° C ಮತ್ತು 20 ° C ಆಗಿರಬಹುದು.
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ವಾತಾವರಣ ಹೀಗಿರಲಿದೆ. ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗವು (40-50 kmph) ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ° C ಮತ್ತು 20 ° C ಆಗಿರಬಹುದು.
ಪ್ರಸ್ತುತ ಕರ್ನಾಟಕ, ಗುಜರಾತ್, ಕೇರಳದ ಕರಾವಳಿ ಭಾಗಗಳಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಜುಲೈ 30ರವರೆಗೆ ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಉತ್ತರ ಮತ್ತು ದಕ್ಷಣ ಒಳನಾಡಿನಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಹಲವು ಜಲಾಶಯಗಳಿಂದ ಭಾರೀ ಪ್ರಮಾಣದ ನೀರನ್ನು ಹೊರಗೆ ಬಿಡಲಾಗಿದ್ದು, ನದಿಪಾತ್ರಗಳು ನಾಗರಿಕರು ಅಪಾಯಕಾರಿ ಸ್ಥಳಗಳಲ್ಲಿ ಸಂಚರಿಸಲದಂತೆ ಎಚ್ಚರಿಕೆ ನೀಡಲಾಗಿದೆ.