ಬೆಂಗಳೂರು: ರಾಜ್ಯಾದ್ಯಂತ 4 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬೆಂಗಳೂರಿನಲ್ಲಿ ಇಂದು ಕೂಡ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಸೇರಿ ರಾಜ್ಯದ 6 ಜಿಲ್ಲೆಗಳಿಗೆ ಎರಡು ದಿನ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಂಡಿ ನೋವು, ಸಂದಿ ನೋವುಗಳಿಂದ ಜೀವನದಲ್ಲಿ ಬೇಸತ್ತಿದ್ದರೆ ಇದೊಂದು ಚಿಕಿತ್ಸೆ ಪ್ರಯತ್ನ ಮಾಡಿ: ಉಚಿತ ಸಲಹೆ
ಬೆಂಗಳೂರಿನಲ್ಲಿ ಗುಡುಗಿನ ಜೊತೆಗೆ ಮೇಲ್ಮೈ ಗಾಳಿ ಬಲವಾಗಿ ಬೀಸುವ ಸಾಧ್ಯತೆಯಿದ್ದು, ಮರದ ಕೆಳಗೆ, ತಾತ್ಕಾಲಿಕ ಶೆಲ್ಟರ್ ಕೆಳಗೆ ನಿಲ್ಲದಿರಿ ಎಂದು ಎಚ್ಚರಿಕೆ ನೀಡಲಾಗಿದೆ. ಬಲವಾದ ಗಾಳಿ ಜೊತೆಗೆ ಧಾರಾಕಾರ ಮಳೆ ಸಾಧ್ಯತೆಯಿದೆ. ಸಂಜೆಯ ನಂತರ ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ