ಶ್ರೀನಗರ: ಭಾರೀ ಮಳೆಯಿಂದಾಗಿ ಇಂದು (ಶನಿವಾರ) ಗುಹಾ ದೇಗುಲಕ್ಕೆ ಎರಡೂ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು (Amarnath Yatra) ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಶುಕ್ರವಾರ ರಾತ್ರಿಯಿಂದ ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಭಾರೀ ಮಳೆ ಸುರಿದಿದೆ. ಹೀಗಾಗಿ ಯಾತ್ರಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಆಗಸ್ಟ್ ತಿಂಗಳಲ್ಲಿ ನರೇಂದ್ರ ಮೋದಿ ಸರ್ಕಾರ ಪತನ: RJD ವರಿಷ್ಠ ಲಾಲು ಪ್ರಸಾದ್ ಭವಿಷ್ಯ!
ಇದುವರೆಗೆ 1.50 ಲಕ್ಷಕ್ಕೂ ಹೆಚ್ಚು ಮಂದಿ ಭಕ್ತರು 3,800 ಮೀಟರ್ ಎತ್ತರದ ಗುಹಾಂತರ ದೇಗುಲಕ್ಕೆ ಭೇಟಿ ನೀಡಿ ನೈಸರ್ಗಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಲಿಂಗದ ದರ್ಶನವನ್ನು ಪಡೆದಿದ್ದಾರೆ. ಸುಮಾರು 4.5 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಕಳೆದ ವರ್ಷ ಗುಹಾ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಕಳೆದ ಒಂದು ವಾರದಲ್ಲಿ ಅತಿ ಹೆಚ್ಚು ತಾಪಮಾನದಿಂದಾಗಿ ಶಿವಲಿಂಗ ಕರಗುವ ಪ್ರಕ್ರಿಯೆಯು ವೇಗಗೊಂಡಿದೆ. 2008 ರ ನಂತರ ಯಾತ್ರೆಯ ಮೊದಲ 10 ದಿನಗಳಲ್ಲಿ ಮಂಜುಗಡ್ಡೆಯ ಶಿವಲಿಂಗವು ಸಂಪೂರ್ಣವಾಗಿ ಕಣ್ಮರೆಯಾಗಿರುವುದು ಇದೇ ಮೊದಲ ಬಾರಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.