ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಭರ್ಜರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಲೆ ಕೇಸ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್.. ದಾಸನಿಗೆ ಸಿಗುತ್ತಾ ಬೇಲ್..!
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಬೆಳಗಾವಿ ಸೇರಿದಂತೆ ಕರ್ನಾಟಕದಾದ್ಯಂತ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು, ಮತ್ತು ಬಲವಾದ ಗಾಳಿ ಬೀಸುವ ಎಚ್ಚರಿಕೆಯನ್ನು ನೀಡಿದೆ. ಜೂನ್ 17 ರವರೆಗೆ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ ಹವಾಮಾನ ಇಲಾಖೆ.
ಕರ್ನಾಟಕದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮುಂಗಾರು ಮಳೆಯಿಂದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ ಏಳು ದಿನಗಳ ಕಾಲವೂ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.