ಬೆಂಗಳೂರು:- ಮಳೆ ಅಬ್ಬರ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆ ಕೂಡ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ರಜೆ ಘೋಷಿಸಲಾಗಿದೆ.
Kolara: ಖಾಸಗಿ ವಲಯದಲ್ಲಿ ಕನ್ನಡಿಗರ ಉದ್ಯೋಗಕ್ಕಾಗಿ ಕರವೇ ಪ್ರತಿಭಟನೆ!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಹೀಗಾಗಿ ನಾಳೆ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜ್ಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯೂ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಜಿಲ್ಲೆಯಲ್ಲಿ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜುವರೆಗೆ ರಜೆ ನೀಡಿ ಡಿಸಿ ಮುಳೈ ಮುಗಿಲನ್ ಆದೇಶಿಸಿದ್ದಾರೆ. ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರಲಿದೆ.
ಇನ್ನು ಉಡುಪಿ ಜಿಲ್ಲೆಯಲ್ಲಿ ವರ್ಷಧಾರೆ ಮುಂದುವರೆದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ & ಪ್ರೌಢಶಾಲೆ, PU ಕಾಲೇಜಿಗಳಿಗೆ ನಾಳೆಯೂ ರಜೆ ನೀಡಲಾಗಿದೆ. ಯುಜಿ, ಪಿಜಿ, ITI, ಡಿಪ್ಲೊಮಾ, ಇಂಜಿನಿಯರಿಂಗ್ ಕಾಲೇಜಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ನಾಳೆಯೂ ರೆಡ್ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸಾಗರ, ಸೊರಬ, ಹೊಸನಗರ ತಾಲೂಕಿನ ಶಾಲಾ ಕಾಲೇಜಿಗೆ ಆಯಾ ತಹಶೀಲ್ದಾರ್ಗಳು ನಾಳೆ ರಜೆ ಘೋಷಣೆ ಮಾಡಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದೆ. ಹಾಗಾಗಿ ಜಿಲ್ಲೆಯ ಆರು ತಾಲ್ಲೂಕುಗಳ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ ಮತ್ತು ಅರಕಲಗೂಡು ತಾಲ್ಲೂಕಿನ ಅಂಗನವಾಡಿ, ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಾಳೆ ರಜೆ ನೀಡಿ ಡಿಡಿಪಿಐ ಹೆಚ್ಕೆ ಪಾಂಡು ಆದೇಶಿಸಿದ್ದಾರೆ.