ಬೆಂಗಳೂರು:- ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನಿನ್ನೆ ಒಂದೇ ಸಮನೆ ಸುರಿದ ಬಿರುಸಿನ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ.
ಯುವತಿಯರೇ ತೆಂಗಿನ ಹಾಲಿನಿಂದ ಸ್ನಾನ ಮಾಡಿ.. ಬಳಿಕ ಆಗುವ ಚಮತ್ಕಾರ ನೀವೆ ನೋಡಿ!
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಗೆ ನಗರದ ಬಹುತೇಕ ಭಾಗಗಳಲ್ಲಿ ಮರಗಳು ಧರೆಗುರುಳಿವೆ. ನಿನ್ನೆ ಒಂದೇ ದಿನ ಬರೋಬ್ಬರಿ 206 ಮರಗಳು ಧರೆಗೆ ಉರುಳಿದೆ ಎಂಬ ಮಾಹಿತಿ ಸಿಕ್ಕಿದ್ದು, ಬೆಂಗಳೂರಿನ 38 ಪ್ರದೇಶಗಳಲ್ಲಿ ರಸ್ತೆ, ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿರುವ ಬಗ್ಗೆ ದೂರು ಬಂದಿವೆ. ಸದ್ಯ ರಸ್ತೆಗಳಲ್ಲಿ ನಿಂತಿದ್ದ ನೀರು ಖಾಲಿಯಾಗುತ್ತಿದ್ದು, ಪ್ರಮುಖ ರಸ್ತೆಗಳಲ್ಲಿ ಬಿದ್ದ ಮರಗಳನ್ನು ತೆರವು ಮಾಡಲಾಗುತ್ತಿದೆ. ರಾತ್ರಿ ಸುರಿದ ಮಳೆಯಿಂದಾಗಿ ಸಿಲಿಕಾನ್ ಸಿಟಿ ಜನರು ಹೈರಾಣಾಗಿದ್ದಂತೂ ಸುಳ್ಳಲ್ಲ.
ಬೆಂಗಳೂರಿನ ಹಾಸ್ ಮ್ಯಾಟ್ ಆಸ್ಪತ್ರೆ ಸಿಗ್ನಲ್ ಬಳಿ ಚಲಿಸುತ್ತಿದ್ದ ಕಾರು ಮತ್ತು ಆಟೋ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದ್ದು, ಸದ್ಯ ಕಾರು, ಆಟೋದಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ, ಎರಡು ವಾಹನಗಳು ಜಖಂಗೊಂಡಿದ್ದು, ಸದ್ಯ ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಇನ್ನು ಬೆಂಗಳೂರು ನಗರದ ಬಹುತೇಕ ಭಾಗಗಲ್ಲಿ ಸಾವಿರಾರು ಮನೆಗಳಿಗೆ ನೀರು ನುಗ್ಗಿದ್ದು, ನಗರದ ತಗ್ಗು ಪ್ರದೇಶಗಳಲ್ಲಿ ಇರುವ ಬಹುತೇಕ ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆ ಸಮೀಪ ಇರುವ ಮನೆಗಳಿಗೂ ನೀರು ನುಗ್ಗಿದ್ದು, ಇದಕ್ಕೆ ರಾಜಕಾಲುವೆಯನ್ನು ಒತ್ತುವರಿ ಮಾಡಿದ್ದೇ ಕಾರಣ ಎಂದು ಬಿಡಿಸಿ ಹೇಳಬೇಕಾಗಿಲ್ಲ. ಇದರ ಜೊತೆಗೆ ಭಾರೀ ಗಾಳಿಯ ರಭಸಕ್ಕೆ ಫ್ಲೋರ್ಗಳಲ್ಲಿರುವ ಮನೆ, ಫ್ಲಾಟ್ಗಳ ಮೇಲೂ ನೀರು ನುಗ್ಗಿದೆ
ಇನ್ನು ಬೀದರ್ ಜಿಲ್ಲೆಯಲ್ಲಿ ವರುಣನ ಅವಾಂತರ ಸೃಷ್ಟಿಯಾಗಿದ್ದು, ಮೊದಲ ಮಳಗೆ ಮನೆಗಳಿಗೆ ನೀರು ನುಗ್ಗಿದೆ. ಹುಲಸೂರು ತಾಲೂಕಿನ ಶ್ರೀಮಾಳಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ತುಳಸಿರಾಮ, ಪಾಂಡುರಂಗ ಎಂಬುವವರ ಮನೆಗಳಿಗೆ ನೀರು ನುಗ್ಗಿದೆ. ಚರಂಡಿ ಸ್ವಚ್ಚಗೊಳಿಸದ ಕಾರಣ ಮನೆಗಳಿಗೆ ಮಳೆ ನೀರು ನುಗ್ಗಿದ್ದು,ಭಾಲ್ಕಿ, ಹುಲಸೂರು, ಬಸವಕಲ್ಯಾಣದಾದ್ಯಂತ ನಿನ್ನೆ ಮಧ್ಯಾಹ್ನದಿಂದಲೇ ಸುರಿದ ಭಾರೀ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದೆ. ಹುಲಸೂರು ತಾಲೂಕಿನಾದ್ಯಂತ ಗುಡುಗು, ಗಾಳಿ ಸಹಿತ ಧಾರಾಕಾರ ಮಳೆಯಾಗಿದ್ದು, ಗಾಳಿ ಸಹಿತ ಧಾರಾಕಾರ ಮಳೆಗೆ ವಿದ್ಯುತ್ ಕಂಬ, ಬೃಹತ್ ಮರಗಳು ನೆಲಕ್ಕುರುಳಿವೆ.
ಆನೇಕಲ್ ತಾಲ್ಲೂಕಿನಾದ್ಯಂತ ಜೋರು ಮಳೆಯಾಗಿದ್ದು, ಇಂದು ಮುಂಜಾನೆಯೂ ಮಳೆಯಾಗಿದೆ. ನಿನ್ನೆ ರಾತ್ರಿ ಸುರಿದ ಗುಡುಗು ಸಹಿತ ಮಳೆಗೆ ಆನೇಕಲ್, ಚಂದಾಪುರ, ಹೆಬ್ಬಗೋಡಿ, ಎಲೆಕ್ಟ್ರಾನಿಕ್ ಸಿಟಿ ಸುತ್ತಮುತ್ತ ಜನರು ಪರದಾಟ ನಡೆಸುದ್ದಾರೆ. ನಿನ್ನೆ ಸಂಜೆಯೂ ಇದೇ ರೀತಿ ಆನೇಕಲ್ ತಾಲ್ಲೂಕಿನಲ್ಲಿ ಮಳೆ ಸುರಿದಿತ್ತು. ಭಾರೀ ಮಳೆಗೆ ಪಾದಚಾರಿಗಳು, ವಾಹನ ಸವಾರರು ಹೈರಾಣಾಗಿದ್ದಾರೆ.