ಕೊಡಗು: ಕೊಡಗು ಜಿಲ್ಲೆಗೆ ನಾಳೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರಾಜಪೇಟೆ ಮತ್ತು ಮಡಿಕೇರಿ ಕ್ಷೇತ್ರದಲ್ಲಿ ಮಳೆಹಾನಿ ಪ್ರದೇಶಗಳ ಪರಿಶೀಲನೆ ನಡೆಸಲಿದ್ದಾರೆ. ನಂತರ ಕುಟ್ಟ-ಮಂಚಳ್ಳಿ ರಸ್ತೆಯಲ್ಲಿ ಬರೆಕುಸಿತಗೊಂಡ ಸ್ಥಳ ಹಾಗೂ ಶ್ರೀಮಂಗಲದ ಕಾಯಿಮಾನಿಯಲ್ಲಿ ಮಳೆಹಾನಿ ಪರಿಶೀಲನೆ ಮಾಡಲಿದ್ದಾರೆ.
ಅಬ್ಬಬ್ಬಾ! ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಹಿಡಿದು 150 ಕ್ಕೂ ಹೆಚ್ಚು ರೋಗಗಳಿಗೆ ರಾಮಬಾಣ ಈ ʼʼಕಾಡು ಬಸಳೆʼʼ
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ಗೌಡ ಅವರ ಮನವಿ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಡಗಿಗೆ ಆಗಮಿಸಲಿದ್ದು, ಜಿಲ್ಲೆಯ ಎರಡು ಕ್ಷೇತ್ರಗಳ ಮಳೆಹಾನಿ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಭೇಟಿ ನೀಡಲಿದ್ದಾರೆ.