ಬೆಂಗಳೂರು:- ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆಯಿಂದ ಅವಾಂತರ ಸೃಷ್ಟಿ ಆಗಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
RCB ಪ್ಲೇ ಆಫ್ ಗೆ ಎಂಟ್ರಿ.. “ಅದೃಷ್ಟ ತಂದ ಹೆಣ್ಣು”.. ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟೋ ವೈರಲ್!
ರಾತ್ರಿ ಸುರಿದ ಮಳೆಗೆ ಯಲಹಂಕದ ನಾರ್ತ್ ಹುಡ್ ಅಪಾರ್ಟ್ಮೆಂಟ್ ಸುತ್ತಮುತ್ತ ನೀರು ತುಂಬಿಕೊಂಡಿದೆ. ಕಳೆದ ಒಂದು ವಾರದಿಂದ ರಾಜಕಾಲುವೆಯಿಂದ ನೀರು ಹರಿಯುತ್ತಿದೆ. ಸ್ಟಾರ್ಮ್ ವಾಟರ್ ಡ್ರೇನ್ ಓಪನ್ ಬಿಟ್ಟಿರೋದರಿಂದ ಸಮಸ್ಯೆಯಾಗ್ತಿದೆ ಎಂದು ನಿವಾಸಿಗಳು ಆರೋಪಿಸಿದ್ದಾರೆ
ರಾಜಕಾಲುವೆ ನೀರಿನ ವಾಸನೆಗೆ ನಿವಾಸಿಗಳು ಕಂಗಾಲಾಗಿದ್ದಾರೆ. ವಾಸನೆ ತಾಳಲಾರದೇ ಕೆಲ ನಿವಾಸಿಗಳು ಮನೆ ಖಾಲಿ ಮಾಡಿದ್ದಾರೆ. ಮೋಟಾರ್ ನಲ್ಲಿ ನೀರು ಹೊರಹಾಕಲು ನಿತ್ಯ ಹರಸಾಹಸ ಮಾಡ್ತಿದ್ದಾರೆ. ವಾರದ ಹಿಂದೆ ಬಿಬಿಎಂಪಿಗೆ ಪತ್ರ ಬರೆದ್ರೂ ಯಾವುದೇ ಪ್ರಯೋಜನವಾಗಿಲ್ಲ. ರಾಜಕಾಲುವೆಯಿಂದ ನೀರು ತುಂಬಿ 22 ಮನೆಗಳ ನಿವಾಸಿಗಳಿಗೆ ಸಂಕಷ್ಟ ಎದುರಾಗಿದೆ. ಪಕ್ಕದಲ್ಲಿರೋ ಪುಟ್ಟೇನಹಳ್ಳಿ ಕೆರೆಗೆ ನೀರು ಹರಿಯದೇ ಇರುವುದರಿಂದ ಆ ನೀರು ಕೂಡ ಹಾಳಾಗುತ್ತಿದೆ. ರಾಜಕಾಲುವೆ, ಮಳೆ ನೀರು ಸೇರಿ ಇಡೀ ಏರಿಯಾ ಕೆರೆಯಂತಾಗಿದೆ.
ಮತ್ತೊಂದೆಡೆ ಚಿಕ್ಕಮಗಳೂರು ತಾಲೂಕಿನ ಕಸ್ಕೆ ಎಂಬಲ್ಲಿ ಭಾರಿ ಗಾಳಿ ಮಳೆಯಿಂದ ಮನೆ ಮೇಲೆ ಮರ ಬಿದ್ದು ಮನೆಯಲ್ಲಿದ್ದ ಎಲ್ಲ ವಸ್ತುಗಳು ನಾಶವಾಗಿವೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)