ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಸಹ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಭಾಗಗಳಲ್ಲಿ ಗಾಳಿಯ ವೇಗವು 40-50 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಕೆಆರ್ಎಸ್ನಿಂದ 1.50 ಲಕ್ಷ ಕ್ಯುಸೆಕ್ ನೀರು ಬಿಡುಗಡೆ: ಜೊತೆಗೂ ಕಬಿನಿಯಿಂದಲೂ ನೀರು ಹೊರಕ್ಕೆ!
ಕಾಫಿನಾಡ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಇಂದು ಮಲೆನಾಡಿಗೆ ರೆಡ್ ಅಲರ್ಟ್ ಹಿನ್ನೆಲೆ ಮಲೆನಾಡು ಭಾಗದ ಆರು ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜು, ಪದವಿ ಕಾಲೇಜಿಗೂ ರಜೆ ಘೋಷಣೆ ಧಾರಾಕಾರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ
ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಚಿಕ್ಕಮಗಳೂರು, ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಬಯಲುಸೀಮೆ ತಾಲೂಕುಗಳಾದ ಕಡೂರು, ತರೀಕೆರೆ, ಅಜ್ಜಂಪುರಕ್ಕೆ ರಜೆ ಇಲ್ಲ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾಋಎ. ಹಾಗೆ ಉಡುಪಿಯಲ್ಲೂ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ.