ಬೆಂಗಳೂರು:- ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಫೆಬ್ರವರಿ 1 ರಿಂದ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.