ಹಾಸನ:- ಹಾಸನ ನಗರ ಸೇರಿದಂತೆ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಇದರಿಂದಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡು ವಾಹನ ಸವಾರರು ಪರದಾಡಬೇಕಾಯಿತು.
ಕಲುಷಿತ ನೀರು ಕುಡಿದು ಅಸ್ವಸ್ಥ: 500ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು!
ಹಾಸನ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತೆ ಇರುವ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿತ್ತು.
ಹಾಸನ, ಚನ್ನರಾಯಪಟ್ಟಣ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಒಂದು ಕಡೆ ಅತಿವೃಷ್ಟಿ ಮತ್ತೊಂದು ಕಡೆ ಅನಾವೃಷ್ಟಿಯಿಂದ ರೈತರು, ಕಾಫಿ ಬೆಳೆಗಾರರು ತ್ರಿಶಂಕು ಸ್ಥಿತಿಗೆ ಸಿಲುಕಿ ತೊಂದರೆ ಅನುಭವಿಸುವಂತಾಗಿದೆ.