ಬೆಂಗಳೂರು ;- ರಾಜ್ಯಾದ್ಯಂತ ಅಂಗನವಾಡಿಗಳಿಗೆ ಪೂರೈಕೆ ಮಾಡುತ್ತಿರುವ ಕಳಪೆ ಮೊಟ್ಟೆ ಪೂರೈಕೆ ಸಂಬಂಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಆದೇಶ ಹೊರಡಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಂಗನವಾಡಿಗಳಿಗೆ ಕಳಪೆ ಮೊಟ್ಟೆ ವಿತರಿಸುತ್ತಿರುವ ಪ್ರಕರಣಗಳು ವರದಿಯಾದ ಜಿಲ್ಲೆಗಳಷ್ಟೇ ಅಲ್ಲದೇ ರಾಜ್ಯಾದ್ಯಂತ ತನಿಖೆ ನಡೆಸಲು ಸೂಚನೆ ನೀಡಿದ್ದೇನೆ.

ಈ ಬಗ್ಗೆ ವರದಿ ಬಂದ ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು.
