ತುಮಕೂರು:-ಹೆಜ್ಜೇನು ದಾಳಿ ನಡೆದ ಹಿನ್ನೆಲೆ, ಓರ್ವ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಲಕ್ಕೇನಹಳ್ಳಿ ಗೇಟ್ ಬಳಿ ಜರುಗಿದೆ.
ಗ್ರಾಮದ ರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ನಡೆಯುತ್ತಿದ್ದ ನಾಮಕರಣ ಕಾರ್ಯಕ್ರಮದಲ್ಲಿ ಹಾಜರಾದ ಜನರ ಮೇಲೆ ದಿಢೀರನೆ ಹೆಜ್ಜೇನು ದಾಳಿ ನಡೆದಿದೆ. 47 ವರ್ಷದ ವೀರಭದ್ರಯ್ಯ ಹೆಜ್ಜೇನು ದಾಳಿಯಿಂದ ಸಾವನ್ನಪ್ಪಿದ್ದಾನೆ.
ಇನ್ನೂ ಗಾಯಾಳುಗಳನ್ನು ಗುಬ್ಬಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಿಸಲಾಗಿದೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.