ಎರಡು ದಿನಗಳ ಹಿಂದೆ ಬ್ರೈನ್ ಹ್ಯಾಮರೇಜ್ (Brain Hemorrhage) ಗೆ ತುತ್ತಾಗಿದ್ದ ಹಿರಿಯ ನಟಿ ಹೇಮಾ ಚೌಧರಿ (Hema Chaudhary) ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ. ನಗರ ಪ್ರತಿಷ್ಠಿತ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು ಬೆಳಗ್ಗೆಗಿಂತ ಈಗ ಅವರ ಆರೋಗ್ಯದಲ್ಲಿ ಅಲ್ಪ ಚೇತರಿಕೆ ಕಂಡಿದೆ ಎಂದು ಹೇಳಲಾಗುತ್ತಿದೆ.
ಬೆಳಗ್ಗೆ ಹೇಮಾ ಚೌಧರಿ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಎರಡು ದಿನಗಳ ಹಿಂದೆ ಅವರಿಗೆ ಬ್ರೈನ್ ಹ್ಯಾಮರೇಜ್ ಆಗಿದ್ದು, ಕೂಡಲೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು.
ಕನ್ನಡ, ಮಲಯಾಳಂ, ತೆಲುಗು, ತಮಿಳು ಹೀಗೆ ನಾನಾ ಭಾಷೆಗಳಲ್ಲಿ ಹೇಮಾ ಚೌಧರಿ ನಟಿಸಿದ್ದಾರೆ. ಕಿರುತೆರೆಯಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಹೀಗಾಗಿ ಹೇಮಾ ಅವರ ಅನಾರೋಗ್ಯ ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಹೇಮಾ ಅವರ ಪುತ್ರ ಐರ್ಲೆಂಡ್ ನಲ್ಲಿ ಇದ್ದು, ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಅವರ ಪುತ್ರನೇ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.