ಬೆಂಗಳೂರು: ಬಿಬಿಎಂಪಿ ಶಾಲೆಗಳು ಇನ್ಮುಂದೆ ಶಿಕ್ಷಣ ಇಲಾಖೆ ಅಧೀನಕ್ಕೆ ನೀಡಲು ಬಿಬಿಎಂಪಿ ನಿರ್ಧಾರ ಮಾಡಿದೆ. ಶುಕ್ರವಾರ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಿಬಿಎಂಪಿ ಶಾಲೆಗಳನ್ನ ಶಿಕ್ಷಣ ಇಲಾಖೆಗೆ ನೀಡುವ ನಿರ್ಧಾರ ಮಾಡಲಾಯ್ತು.
Garlic: ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದೇ? ಇಲ್ಲಿದೆ ಉತ್ತರ
ಸಭೆ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಬಿಎಂಪಿ (BBMP) ಶಾಲೆಗಳನ್ನು ಇನ್ಮುಂದೆ ಶಿಕ್ಷಣ ಇಲಾಖೆ ಸುಪರ್ದಿಗೆ ನೀಡಲು ತೀರ್ಮಾನಿಸಲಾಗಿದೆ. ಪ್ರತಿ ವರ್ಷ ಫಲಿತಾಂಶದಲ್ಲಿ ಬಿಬಿಎಂಪಿ ಶಾಲೆಗಳಲ್ಲಿ ಕುಸಿತ ಕಂಡಿರುವುದನ್ನು ನಾವು ಗಮನಿಸಿದ್ದೇವೆ. ಇದಕ್ಕೆ ಅವಕಾಶ ನೀಡಬಾರದು. ಖಾಸಗಿ ಶಾಲೆಗಳಿಗೆ ಸರಿಸಮನಾಗಿ ಗುಣಮಟ್ಟದ ಶಿಕ್ಷಣ ನೀಡಲು ಈ ತೀರ್ಮಾನ ಮಾಡಲಾಗಿದೆ.
ಶಾಲೆಗಳಲ್ಲಿ ಶಿಕ್ಷಣ ನೀಡುವಂತಹ ಜವಾಬ್ದಾರಿಯನ್ನು ಮಾತ್ರ ಶಿಕ್ಷಣ ಇಲಾಖೆಗೆ ನೀಡಲಾಗುತ್ತಿದ್ದು, ಈ ಶಾಲೆಗಳ ಮೂಲಸೌಕರ್ಯಗಳ ಉನ್ನತೀಕರಣ ಹಾಗೂ ನಿರ್ವಹಣೆಯನ್ನು ಬಿಬಿಎಂಪಿಯಿಂದಲೇ ಮಾಡಲಾಗುವುದು. ಶಾಲೆಯ ಜಾಗ, ಕಟ್ಟಡ ನಿರ್ವಹಣೆ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯವನ್ನು ಪಾಲಿಕೆಯಿಂದಲೇ ನಿರ್ವಹಿಸಲಾಗುವುದು. ಗುಣಮಟ್ಟದ ಶಿಕ್ಷಣ ನೀಡುವ ಜವಾಬ್ದಾರಿಯನ್ನು ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದರು.