ಹುಬ್ಬಳ್ಳಿ: ಅದು ಹುಬ್ಬಳ್ಳಿಯ ಪ್ರತಿಷ್ಠಿತ ಗಲ್ಲಿಯಲ್ಲಿರುವ ಸರ್ಕಾರಿ ಶಾಲೆ. ಈ ಶಾಲೆಯ ಮುಂದಿರುವ ಅವ್ಯವಸ್ಥೆ ನೋಡಿದರೇ ಯಾವ ಸಮಯಕ್ಕೆ ಏನಾಗುತ್ತದೆಯೋ ಎಂಬ ಆತಂಕ ಸ್ಥಳೀಯರಲ್ಲಿ ಮಾತ್ರವಲ್ಲದೆ ಪಾಲಕರ ಮನಸ್ಸಿನಲ್ಲಿ ಆತಂಕ ಮನೆ ಮಾಡಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ.. ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮ ಒಂದಿಲ್ಲೊಂದು ಅವ್ಯವಸ್ಥೆಯಿಂದ ಸುದ್ಧಿಯಾಗುತ್ತಲೇ ಇದೆ. ಮೊನ್ನೆಯಷ್ಟೇ ಬೆಸ್ಕಾಂ ನಿರ್ಲಕ್ಷ್ಯದಿಂದ ತಾಯಿ, ಮಗು ಮೃತಪಟ್ಟ ಘಟನೆ ಸಂಭವಿಸಿದ್ದರೂ ಕೂಡ ಹೆಸ್ಕಾಂ ಎಚ್ಚೇತ್ತುಕೊಂಡಿಲ್ಲ.
ಈ ನಿಟ್ಟಿನಲ್ಲಿ ಹುಬ್ಬಳ್ಳಿಯ ಮರಾಠಗಲ್ಲಿಯಲ್ಲಿರುವ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಹೌದು.. ಎಲ್ಲೆಂದರಲ್ಲಿ ಹರಿದು ಬಿದ್ದಿರುವ ಕೇಬಲ್, ತಲೆಗೆ ತಗಲುವಂತಿರುವ ವಿದ್ಯುತ್ ಪ್ರವಹಿಸುವ ಕೇಬಲ್, ಶಾಲೆಯ ಕಟ್ಟಡಕ್ಕೆ ಹೊಂದಿಕೊಂಡಿರುವ ವಿದ್ಯುತ್ ಕಂಬಗಳು. ಇವೆಲ್ಲವೂ ಅಪಘಾತಕ್ಕೆ ಆಹ್ವಾನ ನೀಡುವಂತಿದ್ದರೂ ಯಾರೊಬ್ಬರೂ ಕಾಳಜಿ ವಹಿಸಿಲ್ಲ..
Kambala: ಬೆಂಗಳೂರಲ್ಲಿ ಅದ್ದೂರಿಯಾಗಿ ನ. 25, 26ರಂದು ನಡೆಯಲಿರುವ ನಮ್ಮ ಕಂಬಳ: ಹೇಗಿದೆ ಸಿದ್ಧತೆ!
ಈಗಾಗಲೇ ಸ್ಥಳೀಯರು ಹಾಗೂ ಶಾಲೆಯ ಆಡಳಿತ ಮಂಡಳಿ ಹೆಸ್ಕಾಂ ಇಲಾಖೆ,ಶಿಕ್ಷಣ ಇಲಾಖೆ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟ ಅನಿವಾರ್ಯ ಎನ್ನುತ್ತಾರೆ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ನಾರಾಯಣ ವೈದ್ಯ ಇನ್ನೂ ನೂರಾರು ಮಕ್ಕಳು ಓದುವ ಶಾಲೆಯಲ್ಲಿ ಒಂದನೇ ತರಗತಿಯಿಂದ ಏಳನೇ ತರಗತಿಯ ವರೆಗೆ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
ಅಲ್ಲದೇ ಯಾವ ಸಮಯದಲ್ಲಿ ಏನ ಬೇಕಾದರೂ ಆಗಬಹುದಾಂತ ವಾತಾವರಣ ನಿರ್ಮಾಣವಾಗಿದ್ದರೂ ಕೂಡ ಹೆಸ್ಕಾಂ ನಿರ್ಲಕ್ಷ್ಯ ವಹಿಸಿರುವುದು ನಿಜಕ್ಕೂ ವಿಪರ್ಯಾಸಕರ ಸಂಗತಿಯಾಗಿದೆ. ಬಲಿ ಪಡೆದ ಮೇಲೆಯೇ ಎಚ್ಚೇತ್ತುಕೊಳ್ಳಲಿದೆಯಾ ಹೆಸ್ಕಾಂ ಎಂಬುವಂತ ಅನುಮಾನ ಸಾರ್ವಜನಿಕರಲ್ಲಿ ಹುಟ್ಟು ಹಾಕಿದೆ. ಒಟ್ಟಿನಲ್ಲಿ ಹೆಸ್ಕಾಂ ನಿರ್ಲಕ್ಷ್ಯಕ್ಕೆ ಬಡ ಜೀವಗಳು ಬಲಿಯಾಗುವುದಂತೂ ಖಂಡಿತ. ಇನ್ನಾದರೂ ಹೆಸ್ಕಾಂ ಎಚ್ಚೇತ್ತುಕೊಂಡು ಹುಬ್ಬಳ್ಳಿ ಧಾರವಾಡ ಅವಳಿನಗರದ ಅವ್ಯವಸ್ಥೆ ಸರಿಪಡಿಸುವ ಕಾರ್ಯವನ್ನು ಮಾಡಬೇಕಿದೆ.