ಬೆಂಗಳೂರು: ಹೆಚ್ಎಸ್ಆರ್ ಬಡಾವಣೆಯಲ್ಲಿ ಹಾಯ್ ಮಾತಾಜೀ ದೇವಸ್ಥಾನದ ಕಾರ್ಯಕ್ರಮ ನಡೆಯಿತು. ರಾಜಸ್ಥಾನ ಸಮಾಜ್ ಬೊಮ್ಮನಹಳ್ಳಿ ಟ್ರಸ್ಟ್ ಬೆಂಗಳೂರು ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಎಂ.ಸತೀಶ್ ರೆಡ್ಡಿ ಭಾಗಿಯಾಗಿದ್ದರು. ಈ ವೇಳೆ ಆದಿಶಕ್ತಿ ಅಮ್ಮನವರ ಪೋಟೋಗೆ ಹೂಮಾಲೆ ಹಾಕಿ ಭಕ್ತಿಯಿಂದ ನಮಿಸಿದರು. ಭಜನೆ ಮಾಡಿ ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು. ಈ ಕಾರ್ಯಕ್ರಮದಲ್ಲಿ ರಾಜಸ್ಥಾನ ಸಮಾಜ್ ಟ್ರಸ್ಟ್ ನ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.
