ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಅವರ ಪುತ್ರ, ಸಚಿವ ಮಲ್ಲಿಕಾರ್ಜುನ್ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಚುನಾವಣೆ ಸಮಯದಲ್ಲಿ ಶಾಮನೂರು ಶಿವಶಂಕರಪ್ಪ ಹಾಗೂ S.S.ಮಲ್ಲಿಕಾರ್ಜುನ್ ಕುಕ್ಕರ್, ಸೀರೆ ಹಂಚಿಕೆ ಮಾಡಿದ್ದರು ಎಂದು ಆರೋಪಿಸಿ ಪ್ರಕರಣ ದಾಖಲಾಗಿತ್ತು. ಶಾಮನೂರು ಶಿವಶಂಕರಪ್ಪ, ಮಲ್ಲಿಕಾರ್ಜುನ್ ವಿರುದ್ಧ ಅಂದಿನ SP ಸಿ.ಬಿ.ರಿಷ್ಯಂತ್ ದೂರು ದಾಖಲಿಸಿದ್ದರು.
ದೂರು ದಾಖಲಾಗಿ 6 ತಿಂಗಳಾದ್ರೂ ಪೊಲೀಸರು ನ್ಯಾಯಾಲಯಕ್ಕೆ ಚಾರ್ಟ್ ಸಲ್ಲಿಸಿರಲಿಲ್ಲ. ಚಾರ್ಜ್ ಶೀಟ್ ಹಾಕದೇ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಪರಾಜಿತ ಪಕ್ಷೇತರ ಅಭ್ಯರ್ಥಿ ಸುಭಾನ್ ಖಾನ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ನ್ಯಾಯಾಲಯದಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಹಾಗು ಮಲ್ಲಿಕಾರ್ಜುನ ಶಿವಶಂಕರಪ್ಪ ಅವರ ಆರೋಪ ಸಾಭೀತಾದರೆ ತಂದೆ, ಮಗನಿಗೆ ಸಂಕಷ್ಟ ಎದುರಾಗಲಿದೆ.