ಬೆಂಗಳೂರು: ದಿ.ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಪ್ತಿಯಾದ ಜಯಲಲಿತಾ ಒಡವೆಯನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಒಡವೆ ಸ್ವೀಕರಿಸಲು ತಮಿಳುನಾಡಿನಿಂದ ಇಬ್ಬರು ಅಧಿಕಾರಿಗಳ ನೇಮಕ ಮಾಡಲಾಗಿದೆ.
ತಮಿಳುನಾಡು ಗೃಹ ಪ್ರಧಾನ ಕಾರ್ಯದರ್ಶಿ ಮತ್ತು ಐಜಿಪಿ ವಿಜಿಲೆನ್ಸ್ ಹಾಜರಿರಬೇಕು. ಒಡವೆ ತೆಗೆದುಕೊಂಡು ಹೋಗಲು 6 ಟ್ರಂಕ್ಗಳನ್ನು ತರುವಂತೆ ಕೋರ್ಟ್ ಸೂಚನೆ ನೀಡಿದೆ. ವಿಡಿಯೋಗ್ರಾಫರ್, ಫೋಟೋಗ್ರಾಫರ್, ಎರಡೂ ದಿನಗಳು ಸಿಟಿ ಸಿವಿಲ್ ಕೋರ್ಟ್ನಲ್ಲಿ ಭದ್ರತೆ ಒದಗಿಸುವಂತೆ ವಿಶೇಷ ನ್ಯಾಯಾಧೀಶ ಮೋಹನ್ರಿಂದ ಸೂಚನೆ ನೀಡಲಾಗಿದೆ.
IAF Recruitment: ಭಾರತೀಯ ವಾಯುಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ! ಇಂದೇ ಅರ್ಜಿ ಸಲ್ಲಸಿ
ಹೌದು ಕಳೆದ ವರ್ಷ ಮಾರ್ಚ್ 6, 7ರಂದು ಒಡವೆ ಹಸ್ತಾಂತರಿಸಬೇಕಿತ್ತು. ಆದರೆ ವಿಶೇಷ ಕೋರ್ಟ್ ಆದೇಶದಿಂದ ತಮ್ಮ ಹಕ್ಕಿಗೆ ಧಕ್ಕೆ ಎಂದು ಜಯಲಲಿತಾ ವಾರಸುದಾರೆ ಜೆ.ದೀಪಾ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ಆದೇಶದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಜೆ.ದೀಪಾ ಅರ್ಜಿಗೆ ಎಸ್ಪಿಪಿ ಕಿರಣ್ ಜವಳಿ ಆಕ್ಷೇಪಣೆ ಸಲ್ಲಿಸಿದ್ದರು. ತಮಿಳುನಾಡು ಸರ್ಕಾರದ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದಿಸಿದ್ದರು. ವಿಚಾರಣೆ ನಡೆಸಿ ಜೆ.ದೀಪಾ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.