ಬೆಂಗಳೂರು:- ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣದಲ್ಲಿ ರಾಹುಲ್ ಗಾಂಧಿ ವಿಚಾರಣೆ ಪ್ರಶ್ನಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆ, ಖಾದರ್ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಶಿವಾಜಿನಗರ ಠಾಣೆ ಸಬ್ ಇನ್ಸ್ಪೆಕ್ಟರ್ ದಾಖಲಿಸಿದ್ದ ಖಾಸಗಿ ದೂರು ಮತ್ತು ಆ ಕುರಿತ ಎಸಿಎಂಎಂ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಯು.ಟಿ. ಖಾದರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.
ಇದೇ ಪ್ರಕರಣ ಸಂಬಂಧ, ಈ ಹಿಂದೆ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೇರಿದಂತೆ ಕಾಂಗ್ರೆಸ್ನ ಹಲವು ಮುಖಂಡರ ವಿರುದ್ಧ ಶಿವಾಜಿ ನಗರ ಠಾಣೆ ಪೊಲೀಸರು ದಾಖಲಿಸಿದ್ದ ದೂರು ರದ್ದುಪಡಿಸಿ ಹೈಕೋರ್ಟ್, 2023ರ ಜುಲೈ 7ರಂದು ಆದೇಶಿಸಿತ್ತು. ಅದೇ ಆದೇಶವನ್ನು ಆಧರಿಸಿ ಯು.ಟಿ. ಖಾದರ್ ಅವರ ವಿರುದ್ಧದ ಪ್ರಕರಣವನ್ನೂ ರದ್ದುಪಡಿಸಿ ಆದೇಶಿಸಿದೆ.