ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹನಿಟ್ರ್ಯಾಪ್ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಕಳೆದ ಮೂರು ದಿನಗಳ ಹಿಂದಷ್ಟೇ ಟೆಕ್ಕಿಗಳನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದ ಗ್ಯಾಂಗ್ ವೊಂದನ್ನು ಪೊಲೀಸರು ಬಂಧಿಸಿದ್ದರು. ಅದರ ಬೆನ್ನಲ್ಲೇ ಇದೀಗ ಹೆಬ್ಬಾಳ ಠಾಣೆ ಪೊಲೀಸರು ಆರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಗೀತಾ, ಮಂಜುಳಾ, ವಿಜಯಲಕ್ಷ್ಮಿ, ಲೀಲಾವತಿ, ಹರೀಶ್, ವೆಂಕಟೇಶ ಬಂಧಿತ ಆರೋಪಿಗಳಾಗಿದ್ದು,
ಕೆಲ ದಿನಗಳ ಹಿಂದೆ ಸಂತ್ರಸ್ತ ಯುವಕನಿಗೆ ಆರೋಪಿ ಮಂಜುಳ ಪರಿಚಿತರಾಗಿದ್ದಳು. ಪರಸ್ಪರ ಮೊಬೈಲ್ ನಂಬರ್ ಬದಲಾಯಿಸಿಕೊಂಡಿದ್ದರು. ಸಂತ್ರಸ್ತ ಯುವಕ “ತಾನು ವಧು ಹುಡುಕುತ್ತಿದ್ದು ಕನ್ಯೆ ಇದ್ದರೆ ಹೇಳಿ” ಎಂದು ಮಂಜುಳಗೆ ಹೇಳಿದ್ದರು. ಸಂತ್ರಸ್ತ ಯುವಕ ಜನವರಿ 20 ರಂದು ಮಂಜುಳಾಗೆ ಕರೆ ಮಾಡಿ ವಿಚಾರಿಸಿದಾಗ, ಹೆಬ್ಬಾಳದ ತನ್ನ ಸ್ನೇಹಿತೆ ಮನೆಗೆ ಹೋದರೆ ಕನ್ಯೆ ತೋರಿಸುವುದಾಗಿ ಹೇಳಿದ್ದಳು.
ಗ್ರಾಹಕರೇ ಗಮನಿಸಿ: ಇಂದಿನಿಂದ UPI, LPG ಸಿಲಿಂಡರ್, ವಾಹನ ನಿಯಮಗಳಲ್ಲಿ ಆಗಲಿದೆ ಮಹತ್ವದ ಬದಲಾವಣೆಗಳು!
ಅದರಂತೆ ಮಂಜುಳ ಸ್ನೇಹಿತೆ ವಿಜಯಲಕ್ಷ್ಮಿ ಮನೆಗೆ ಸಂತ್ರಸ್ತ ಯುವಕ ಹೋಗಿದ್ದನು. ಮನೆಯಲ್ಲಿ ಲೀಲಾವತಿ ಎಂಬ ಯುವತಿಯನ್ನು ಯುವಕನಿಗೆ ವಿಜಯಲಕ್ಷ್ಮಿ ಪರಿಚಯ ಮಾಡಿಸಿದ್ದಾಳೆ. “ಟೀ ತಯಾರಿಸುತ್ತಿರು ಬರುತ್ತೇನೆ” ಎಂದು ಹೇಳಿ, ಯುವಕನಿಂದ ಹಣ ಪಡೆದು ವಿಜಯಲಕ್ಷ್ಮಿ ಮನೆಯಿಂದ ತೆರಳಿದ್ದಾಳೆ.
ಮನೆಯಲ್ಲಿ ಒಂಟಿಯಾಗಿದ್ದ ಸಂತ್ರಸ್ತ ಯುವಕ ಮತ್ತು ಲೀಲಾವತಿ ಇಬ್ಬರೇ ಇದ್ದಾರೆ. ಈ ವೇಳೆ ಪೊಲೀಸರ ಸೋಗಿನಲ್ಲಿ ಗೀತಾ, ಹರೀಶ ಮತ್ತು ವೆಂಕಟೇಶ ಬಂದಿದ್ದಾರೆ. ಮನೆಯಲ್ಲಿ ವೈಶ್ಯಾವಾಟಿಕೆ ನಡೆಸುತ್ತಿದ್ದೀರಾ? ಇಬ್ಬರನ್ನೂ ಬಂಧಿಸಿ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಹೆದರಿದ ಸಂತ್ರಸ್ತ ಯುವಕ, ಆರೋಪಿಗಳಿಗೆ ಪೋನ್ ಪೇ ಮೂಲಕ 50 ಸಾವಿರ ಹಣ ಕಳುಹಿಸಿದ್ದಾನೆ.
ಬಳಿಕ, ತಾನು ಮೋಸ ಹೋಗಿದ್ದೇನೆ ಎಂದು ತಿಳಿದ ಸಂತ್ರಸ್ತ ಯುವ, ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ಆರು ಜನ ಆರೋಪಿಗಳನ್ನ ಬಂಧಿಸಿದ್ದಾರೆ.