ತುಮಕೂರು: ಮನೆಗಳಿಗೆ ಸಂಪರ್ಕ ಕಲ್ಪಿಸುವ ವಿದ್ಯುತ್ ತಂತಿ ಮೇಲೆ ಹೈ ಟೆನ್ಷನ್ ವೈಯರ್ ಬಿದ್ದ ಪರಿಣಾಮ ಶಾರ್ಟ್ ಸರ್ಕ್ಯೂಟ್ ನಿಂದ 60ಕ್ಕೂ ಹೆಚ್ಚು ಮನೆಗಳ ವಿದ್ಯುತ್ ಉಪಕರಣಗಳು ಭಸ್ಮವಾಗಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನ ಗ್ರಾಮದ ಮರಿದಾಸನಹಳ್ಳಿಯಲ್ಲಿ ನಡೆದಿದೆ. ಟಿವಿ, ಫ್ರಿಡ್ಜ್, ಫ್ಯಾನ್ ವಾಷಿಂಗ್ ಮಿಷನ್,
ಸೇರಿದಂತೆ ಅನೇಕ ವಸ್ತುಗಳು ಭಸ್ಮವಾಗಿದ್ದು, ಇಂದು ಮುಂಜಾನೆ 5 ಗಂಟೆ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಮನೆಯಿಂದ ಹೊರಗೆ ಓಡಿ ಬಂದು ಜೀವ ಉಳಿಸಿಕೊಂಡ ಗ್ರಾಮಸ್ಥರು. ಮಾಹಿತಿ ತಿಳಿದ ತಕ್ಷಣವೇ ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದರು.