ವಿಜಯಪುರ: ಕರವೇ ನಾರಾಯಣಗೌಡ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕರವೇ ಕಾರ್ಯಕರ್ತರಿಂದ ರಾಜ್ಯ ಬಿಜ್ಜಳ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಹೂವಿನ ಹಿಪ್ಪರಗಿಯಲ್ಲಿ ಪ್ರತಿಭಟನೆ ನಡೆಸಿದ್ದು,
ರಾಜ್ಯ ಬಿಜ್ಜಳ ಹೆದ್ದಾರಿಯನ್ನು ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು. ಕರವೇ ಮುಖಂಡ ಅಶೋಕ ಹಾರಿವಾಳ ನೇತ್ರತ್ವದಲ್ಲಿರಾಜ್ಯ ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.