ತಿರುವನಂತಪುರಂ: ವಯನಾಡಿನಲ್ಲಿ ನಡೆದ ಭೂಕುಸಿತ (Wayanad Landslides) ದುರಂತದಲ್ಲಿ ಈವರೆಗೆ 93 ಮಂದಿ ಸಾವನ್ನಪ್ಪಿದ್ದಾರೆ. ಇದೇ ಅಂತಿಮ ಅಂಕಿ-ಅಂಶವಲ್ಲ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಹೇಳಲಾಗುತ್ತಿದೆ.
ಹಾಗೆ ಇಂದು ರಾಹುಲ್ ಗಾಂಧಿ ಪ್ರಿಯಾಂಕ ಗಾಂಧಿ ವೈನಾಡು ಭೇಟಿ ರದ್ದಾಗಿದ್ದು ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಇಂದಿನ ವೈನಾಡು ಭೇಟಿ ರದ್ದಾಗಿದೆ ಎಂದು ಟ್ವೀಟ್ ಮೂಲಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಕೇರಳದಲ್ಲಿ ಭೂಕುಸಿತ: ಮೃತ ಕುಟುಂಬಸ್ಥರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಶಿಘ್ರದಲ್ಲೇ ನಾನು ವೈನಾಡಿಗೆ ತೆರಳುತ್ತೇನೆ ಇದರಲ್ಲಿ ಯಾವುದೇ ಅನುಮಾನವಿಲ್ಲ ಆದರೆ ಇಲ್ಲೇ ಇದ್ದು ಅಲ್ಲಿ ಆಗಬೇಕಿದ್ದ ಕೆಲಸಗಳು ನಾನು ಮಾಡೇ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆಗೆ ಎರಡು ಹೆಲಿಕಾಪ್ಟರ್ ಸಿದ್ಧವಿದೆ. ಆದ್ರೆ ಪ್ರತಿಕೂಲ ಹವಾಮಾನದಿಂದಾಗಿ ಹಾರಾಟ ಸಾಧ್ಯವಾಗಿಲ್ಲ. ಇನ್ನೂ ಬೆಂಗಳೂರಿನಿಂದ ಬರುವ ತಂಡಕ್ಕೆ ಟ್ರಾಫಿಕ್ ಫ್ರೀ ವ್ಯವಸ್ಥೆ ಮಾಡಿದ್ದೇವೆ. ಅಲ್ಲದೇ ಸಂತ್ರಸ್ತರಿಗಾಗಿ 20,000 ಲೀಟರ್ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಮದ್ರಸಾದಲ್ಲಿ ತಾತ್ಕಾಲಿಕ ಕ್ಲಿನಿಕ್ ವ್ಯವಸ್ಥೆ ಮಾಡಿದ್ದು, ವೈದ್ಯಕೀಯ ತಂಡವನ್ನು ನಿಯೋಜಿಸಿದ್ದೇವೆ. ಖಾಸಗಿ ಆಸ್ಪತ್ರೆ ವೈದ್ಯರು ಹಾಗೂ ಔಷಧಿಗಳ ವ್ಯವಸ್ಥೆಯನ್ನೂ ಮಾಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.