ಮಂಗಳೂರು:- ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ಗೆ ಸಂಬಧಪಟ್ಟಂತೆ ಪ್ರಕರಣದ ಪ್ರಮುಖ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.
ನನಗೆ ನರೇಶ್ ರಾತ್ರಿ ಹೆಚ್ಚು ಸುಸ್ತು ಮಾಡ್ತಾರೆ, ಅವರಿಗೆ ಹೆಚ್ಚು ಶಕ್ತಿ ಇದೆ: ಪವಿತ್ರಾ!
ಬಂಧಿತ ಆರೋಪಿಯನ್ನು ಅತೀಖ್ ಅಹ್ಮದ್ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಇದುವರೆಗೆ 21 ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. 2022 ರ ಜುಲೈನಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸದಸ್ಯರು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಉಳಿದ ಆರು ಆರೋಪಿಗಳನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದ್ದು, ಅವರ ತಲೆಗೆ ಇನಾಮು ಘೋಷಿಸಿದೆ.
ಪಿಎಫ್ಐ ನಾಯಕತ್ವದ ಮಾರ್ಗದರ್ಶನದಲ್ಲಿ ಅತೀಖ್, ಪ್ರಕರಣದ ಪ್ರಮುಖ ಸಂಚುಕೋರ ಎಂದು ಗುರುತಿಸಲ್ಪಟ್ಟ ಮುಸ್ತಫಾ ಪೈಚಾರ್ಗೆ ಆಶ್ರಯ ನೀಡಿ ಸಹಾಯ ಮಾಡಿದ್ದ. ಜನರಲ್ಲಿ ಭಯ ಮತ್ತು ಕೋಮು ಅಶಾಂತಿಯನ್ನು ಹುಟ್ಟುಹಾಕಲು ಪಿಎಫ್ಐ ಕಾರ್ಯಸೂಚಿಯ ಭಾಗವಾಗಿ ಮುಸ್ತಫಾ ಕೊಲೆಯನ್ನು ಯೋಜಿಸಿ ಕಾರ್ಯಗತಗೊಳಿಸಿದ್ದ ಎನ್ನಲಾಗಿದೆ.