ಬೆಂಗಳೂರು:- ಶಾಸಕ ಪ್ರದೀಪ್ ಈಶ್ವರ್ ಅವರು ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಕಿಡಿಕಾರಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಅನಂತ್ ಕುಮಾರ್ ಹೆಗ್ಡೆ ನಾಲಿಗೆ ಹಿಡಿತದಲ್ಲಿ ಇರಲಿ. ಹಿಂದೂ ಧರ್ಮ ನಿಮ್ಮ ಅಪ್ಪನ ಮನೆ ಆಸ್ತಿ ಅಲ್ಲ. ನಮ್ಮ ಎದೆ ಬಗೆದರೆ ರಾಮನೂ ಇದ್ದಾನೆ, ಸಿದ್ದರಾಮಯ್ಯ, ದೇವರಾಜ್ ಅರಸ್ ಕೂಡ ಇದ್ದಾರೆ. ನಮ್ಮ ಎದೆಯಲ್ಲಿ ಅಂಬೇಡ್ಕರ್, ಸಿದ್ದಗಂಗಾ ಶ್ರೀಗಳು ಕೂಡ ಇದ್ದಾರೆ. ನಿನ್ನ ರಕ್ತದಲ್ಲಿ ಮಾತ್ರ ಹಿಂದೂ ಇರೋದಾ, ನಿಮ್ಮ ಅಪ್ಪನ ಮನೆ ಆಸ್ತಿ ಥರಾ ಆಡೋದನ್ನ ನಿಲ್ಲಿಸಿ ಎಂದು ವಾಗ್ದಾಳಿ ನಡೆಸಿದರು.
ಅನಂತ್ ಕುಮಾರ್ ಹೆಗ್ಡೆ ಹೇಳಿಕೆಯಿಂದ ಲಾ ಆಂಡ್ ಆರ್ಡರ್ ಸಮಸ್ಯೆಯಾದ್ರೆ ಯಾರು ಹೊಣೆ..!?. ಪ್ರಚೋದನೆಯಿಂದ ಏನಾದ್ರೂ ಹೆಚ್ಚು ಕಡಿಮೆ ಆದ್ರೆ ಹೆಗ್ಡೆ ಬರ್ತಾರಾ?. ಹೀಗಾಗಿ ಸಂಸದರ ಮೇಲೆ ಎಫ್ಐಆರ್ ಹಾಕಿ, ಒಳಗೆ ಹಾಕಬೇಕು. ಇವರ ವಿರುದ್ಧ ನಮ್ಮ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅನಂತ್ ಕುಮಾರ್ ಹೆಗ್ಡೆ ಮೈಂಡ್ ಯುವರ್ ಟಂಗ್ ಎಂದು ಗರಂ ಆದ ಶಾಸಕರು, ಹಿಂದೂ ಧರ್ಮ ನಿಮ್ಮ ಅಪ್ಪನ ಮನೆ ಸ್ವತ್ತಾ?, ಹಿಂದೂ ಧರ್ಮನ ನಿಮ್ಮ ಅಪ್ಪನ ಮನೆ ಆಸ್ತಿ ತರಹ ಆಡ್ತಿದ್ದೀರಲ್ಲ?, ನಾಲಿಗೆ ಕಂಟ್ರೋಲ್ ನಲ್ಲಿ ಇಟ್ಕೊಳ್ಳಿ ಹೆಗ್ಡೆಯವರೇ. ಬಿಜೆಪಿಯಲ್ಲಿ ಟಿಕೆಟ್ ಸಿಗಲ್ಲ ಅನ್ನೋದು ಗೊತ್ತಾಗಿದೆ. ಇವರ ಬಾಯಿ ಚಪಲದಿಂದ ಹಿಂದೆ ಮಂತ್ರಿಗಿರಿ ಕಳೆದುಕೊಂಡರು. ಬಾಯಿಗೆ ಬಂದಂತೆ ಮಾತಾಡುತ್ತಿದ್ದರೆ ನಾವು ನೋಡಿಕೊಂಡು ಸುಮ್ಮನೆ ಇರಬೇಕಾ ಎಂದು ಪ್ರಶ್ನಿಸಿದರು.
ಮನ್ ಕಿ ಬಾತ್ ಜೊತೆಗೆ ಕಾಮ್ ಕಿ ಬಾತ್ ಮಾತಾಡೋಣ ಬನ್ನಿ. ನಾವೂ ಹಿಂದೂ ಧರ್ಮದವರೇ, ನಮಗೂ ಶ್ರೀರಾಮನ ಮೇಲೆ ನಂಬಿಕೆ ಇದೆ. ನೀವು ಒಂದು ಮಾತಾಡಿದರೆ ನಾವು ನಾಲ್ಕು ಮಾತಾಡ್ತೇವೆ. ಬನ್ನಿ ಈ ಫೈಟ್ ಎಲ್ಲಿಗೆ ಹೋಗಿ ನಿಲ್ಲುತ್ತದೆ ನೋಡೋಣ ಎಂದು ಕಿಡಿಕಾರಿದರು.