ಬೆಂಗಳೂರು:- ಮುಸ್ಲಿಂ ಮನಸ್ಥಿತಿ ಹೊಂದಿರುವ ಹಿಂದೂಗಳಿಂದಲೇ ದೇಶಕ್ಕೆ ಗಂಡಾಂತರ ಎಂದು ಬಿಜೆಪಿ ಮುಖಂಡ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ನಟಿಯರ ಮೈಮುಟ್ಟಿ ವರ್ತನೆ: ‘ಕಾಮುಕ’ ಪ್ರಥಮ್ ಹುಚ್ಚಾಟ ನಿಲ್ಲಿಸಿ, ಕನ್ನಡಿಗರು ಕೆಂಡಾಮಂಡಲ!
ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು, ಮುಸ್ಲಿಮರಿಂದ ದೇಶಕ್ಕೆ ಗಂಡಾಂತರ ಬರುತ್ತೆ ಅಂತ ನಾನು ಹೇಳಲ್ಲ. ಆದರೆ, ಮುಸ್ಲಿಂ ಮನಸ್ಥಿತಿ ಹೊಂದಿರುವ ಈ ಹಿಂದೂಗಳಿಂದ ದೇಶಕ್ಕೆ ಗಂಡಾಂತರ ಬರಲಿದೆ ಎಂದರು.
ಹಿಂದೆಯೂ ಮುಸ್ಲಿಮರಿಗೆ 4% ಮೀಸಲಾತಿ ಇತ್ತು. ಸಂವಿಧಾನದ ಪ್ರಕಾರ ಧಾರ್ಮಿಕ ಮೀಸಲಾತಿ ಕೊಡಲು ಅವಕಾಶ ಇಲ್ಲ. ಬೊಮ್ಮಾಯಿ ಸಿಎಂ ಇದ್ದಾಗ ಮುಸ್ಲಿಮರ ಮೀಸಲಾತಿ ಹಿಂದಕ್ಕೆ ಪಡೆಯಲಾಯಿತು. ಕಾಂಗ್ರೆಸ್ ನವ್ರು ಬಂದ ಮೇಲೆ ಮುಸ್ಲಿಮರಿಗೆ ಮೀಸಲಾತಿ ಕೊಡೋದಾಗಿ ಹೇಳಿದ್ರು. ಇದರ ಭಾಗವಾಗಿ ಈಗ ಗುತ್ತಿಗೆಯಲ್ಲೂ ಮೀಸಲಾತಿ ಕೊಡಲು ಮುಂದಾಗಿದ್ದಾರೆ. ಇದರ ವಿರುದ್ಧ ನಾವು ಸದನದ ಒಳಗೆ ಮತ್ತು ಹೊರಗೆ ಹೋರಾಡ ಮಾಡ್ತೇವೆ. ನಮ್ಮ ರಾಷ್ಟ್ರೀಯ ನಾಯಕರೂ ಇದು ದೇಶ ವಿರೋಧಿ ನಡೆ ಅಂದಿದ್ದಾರೆ. ಇದು ಓಲೈಕೆ ರಾಜಕಾರಣ, ದೇಶಕ್ಕೆ ಗಂಡಾಂತರ ತರುವ ಕೆಲಸ ಎಂದು ತಿಳಿಸಿದ್ದಾರೆ.
ಅಲ್ಪಸಂಖ್ಯಾತರು ಎಂದರೆ ಕೇವಲ ಮುಸ್ಲಿಮರು ಅಲ್ಲ ಎಂಬ ಡಿಕೆಶಿ ಹೇಳಿಕೆ ಕುರಿತು ಮಾತನಾಡಿ, ಜೈನರನ್ನೆಲ್ಲಾ ನೆಪ ಮಾಡಿಕೊಂಡಿದ್ದಾರೆ ಅವರು ಅಷ್ಟೇ. ಆದರೆ ಅವರ ಉದ್ದೇಶ ಕೇವಲ ಮುಸ್ಲಿಮರನ್ನು ಗಮನದಲ್ಲಿಟ್ಟುಕೊಂಡು ಮೀಸಲು ಕೊಡೋದಾಗಿದೆ. ತುಷ್ಟೀಕರಣದ ಭಾಗವಾಗಿ ಇದು ನಡೀತಿದೆ. ನಮ್ಮ ಸರ್ಕಾರ ಬಂದಾಗ ಯಾರನ್ನು ಎಲ್ಲಿ ಇಡಬೇಕು ಇಡ್ತೇವೆ ಎಂದು ಟಾಂಗ್ ಕೊಟ್ಟಿದ್ದಾರೆ.
ಒಳಮೀಸಲಾತಿ ಬಗ್ಗೆ ಪ್ರತಿಕ್ರಿಯಿಸಿ, ಒಳಮೀಸಲಾತಿ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟ. ಒಳಮೀಸಲಾತಿಯನ್ನು ಪರಿಶಿಷ್ಟ ವರ್ಗಕ್ಕೆ ಕೊಡಲೇಬೇಕು. ತೆಲಂಗಾಣದಲ್ಲಿ ಈಗಾಗಲೇ ಘೋಷಣೆ ಆಗಿದೆ. ಆದರೆ, ರಾಜ್ಯ ಸರ್ಕಾರ ವಿಳಂಬ ಮಾಡ್ತಿದೆ. ಒಳಮೀಸಲಾತಿ ಕೊಡಲೇಬೇಕು. ಆದಷ್ಟು ಬೇಗ ಸರ್ಕಾರ ತೀರ್ಮಾನ ಕೈಗೊಳ್ಳಲಿ. ಒಳಮೀಸಲಾತಿಗೆ ಆಗ್ರಹಿಸಿ ಪಾದಯಾತ್ರೆ ಕೂಡಾ ನಡೀತಿದೆ ಎಂದಿದ್ದಾರೆ.