ಹುಬ್ಬಳ್ಳಿ: ಅಣ್ಣನಿಂದ ಒಡ ಹುಟ್ಟಿದ ತಮ್ಮನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯ ವಿಜಯ ನಗರದಲ್ಲಿ ನಡೆದಿದೆ. ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಅನ್ನೋ ಕಾರಣಕ್ಕೆ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.
Accident: ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ: ಅಮೆಜಾನ್ ಕಂಪನಿಯಲ್ಲಿ ಮ್ಯಾನೇಜರ್ ಸಾವು!
ಮೃತ ದುರ್ದೈವಿಯನ್ನು ಪವನ (30) ಎಂದು ಗುರುತಿಸಲಾಗಿದೆ. ಹೊಟ್ಟೆ, ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಅಣ್ಣ ರಾಜುನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.