ಹಾಸನ: ಜಿಲ್ಲೆಯ ಬೇಲೂರು ತಾಲ್ಲೂಕಿನ ಅರೆಹಳ್ಳಿಯಲ್ಲಿ ಅಣ್ಣನೇ ಒಡಹುಟ್ಟಿದ ತಮ್ಮನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಅರೆಹಳ್ಳಿ ಗ್ರಾಮದ ಕೇಶವ ನಗರದ ನಿವಾಸಿ ಸಂಗಯ್ಯ (58) ಮೃತ ರ್ದುದೈವಿ.
ಜಮೀನು ವಿವಾದ ಹಿನ್ನೆಲೆ ಅಣ್ಣ ಈರಯ್ಯ ಎಂಬಾತ ಮಚ್ಚಿನಲ್ಲಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಕೊಲೆ ಆರೋಪಿ ಈರಯ್ಯನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಅರೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.