ಉಡುಪಿ:- ಉಡುಪಿಯಲ್ಲಿ ಸಂಭವಿಸಿದ ಹಿಟ್ & ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ “ಕೈ” ಮುಖಂಡನ ಪುತ್ರನನ್ನು ಅರೆಸ್ಟ್ ಮಾಡಲಾಗಿದೆ.
BBK11: ಬಿಗ್ ಮನೆಯಿಂದ ಹೊರಬಂದ ಅನುಷಾ ರೈ: ವೈಲ್ಡ್ ಕಾರ್ಡ್ ಮೂಲಕ ಇಬ್ಬರು ಎಂಟ್ರಿ!
ಜಿಲ್ಲೆಯ ಕಾಪುವಿನಲ್ಲಿ ನಡೆದ ಹಿಟ್ & ರನ್ ಕೇಸ್ನಲ್ಲಿ ಜೀಪ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಪುತ್ರ ಪ್ರಜ್ವಲ್ ಶೆಟ್ಟಿ ಕಾರು ಚಲಾಯಿಸುತ್ತಿದ್ದ. ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಪ್ರಕರಣ ನಡೆದ ಬೆನ್ನಲ್ಲೇ ಪ್ರಜ್ವಲ್ ಶೆಟ್ಟಿ ತಲೆಮರೆಸಿಕೊಂಡಿದ್ದ. ಪೊಲೀಸರು ಹಿಟ್ & ರನ್ ಕೇಸ್ ದಾಖಲು ಮಾಡಿದ್ದರು. ಈ ಸಂಬಂಧ ಆರೋಪಿಯನ್ನ ಶಿರ್ವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವನ್ನಪ್ಪಿದ ಮೊಹಮ್ಮದ್ ಹುಸೇನ್ ತಂದೆ ಉಮ್ಮರಬ್ಬ ಪ್ರತಿಕ್ರಿಯಿಸಿ, ನನ್ನ ಮಗ ಮುಂಜಾನೆ ಕೆಲಸಕ್ಕೆ ಹೋಗುವಾಗ ಈ ಘಟನೆ ನಡೆದಿದೆ. ಒಂದು ಗಂಟೆ ರಕ್ತದ ಮಡುವಿನಲ್ಲಿಯೇ ಒದ್ದಾಡುತ್ತಿದ್ದ. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರೆ ನನ್ನ ಮಗ ಬದುಕುಳಿಯುತ್ತಿದ್ದ. ಪೊಲೀಸ್ ಇಲಾಖೆಯಿಂದ ನ್ಯಾಯ ಸಿಗಬೇಕು, ಆರೋಪಿಗೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.