ಸೆಪ್ಟಂಬರ್ 19 ರಂದು ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಕಮ್ಬ್ಯಾಕ್ ಮಾಡಲು ಎದುರು ನೋಡುತ್ತಿದೆ. ಮೊದಲನೇ ಪಂದ್ಯ ಗುರುವಾರ ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ. ಬಾಂಗ್ಲಾ ಎದುರು ಎರಡೂ ಪಂದ್ಯಗಳನ್ನು ಗೆದ್ದು ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳಲು ಯೋಜನೆಯನ್ನು ಹಾಕಿಕೊಂಡಿದೆ. ಆ ಮೂಲಕ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಹಾದಿಯನ್ನು ಸುಲಭವಾಗಿಸಿಕೊಳ್ಳುವುದರ ಮೇಲೆ ಕಣ್ಣಿಟ್ಟಿದೆ.
ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಟೂರ್ನಿಯಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಸದ್ಯ 9 ಶತಕಗಳನ್ನು ಪೂರ್ಣಗೊಳಿಸಿದ್ದಾರೆ. ಈ ಟೂರ್ನಿಯಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಭಾರತೀಯ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಒಂದು ಶತಕ ಸಿಡಿಸಿದರೆ, ಟೆಸ್ಟ್ ಚಾಂಪಿಯನ್ಷಿಪ್ನಲ್ಲಿ 10ನೇ ಶತಕವನ್ನು ಪೂರ್ಣಗೊಳಿಸಲಿದ್ದಾರೆ. ಆ ಮೂಲಕ 10 ಶತಕ ಸಿಡಿಸಿದ ಮೊದಲನೇ ಭಾರತೀಯ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.
ಭಾರತ ತಂಡದ ಪರ ಎಲ್ಲಾ ಸ್ವರೂಪದಲ್ಲಿ ರೋಹಿತ್ ಶರ್ಮಾ 48 ಶತಕಗಳನ್ನು ಸಿಡಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ಎರಡು ಶತಕಗಳನ್ನು ಸಿಡಿಸಿದರೆ, ಎಲ್ಲಾ ಸ್ವರೂಪದಲ್ಲಿ 50 ಶತಕಗಳನ್ನು ಪೂರ್ಣಗೊಳಿಸಿದ್ದಾರೆ. ಆ ಮೂಲಕ ಭಾರತದ ಪರ ಅತಿ ಹೆಚ್ಚು ಶತಕಗಳನ್ನು ಸಿಡಿಸಿದ ಪಟ್ಟಿಯಲ್ಲಿ ಮೂರನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ (100 ಶತಕಗಳು) ಹಾಗೂ ವಿರಾಟ್ ಕೊಹ್ಲಿ(80 ಶತಕಗಳು) ಅಗ್ರ ಸ್ಥಾನಗಳಲ್ಲಿದ್ದಾರೆ.
ರೋಹಿತ್ ಶರ್ಮಾ ಅವರು ತಮ್ಮ ವೃತ್ತಿ ಜೀವನದಲ್ಲಿ 84 ಶತಕಗಳನ್ನು ಸಿಡಿಸಿದ್ದಾರೆ. ದೀರ್ಘಾವಧಿ ಸ್ವರೂಪದಲ್ಲಿ ಅತಿ ಹೆಚ್ಚು ಶತಕಗಳನ್ನು ಸಿಡಿಸಿದ ಎರಡನೇ ಭಾರತೀಯ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. 91 ಸಿಕ್ಸರ್ಗಳ ಮೂಲಕ ವೀರೇಂದ್ರ ಸೆಹ್ವಾಗ್ ಅಗ್ರ ಸ್ಥಾನದಲ್ಲಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ 8 ಸಿಕ್ಸರ್ಗಳನ್ನು ಸಿಡಿಸಿದರೆ, ಮಾಜಿ ಆರಂಭಿಕ ವೀರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಮುರಿಯಲಿದ್ದಾರೆ.