ನವದೆಹಲಿ: ರಾಷ್ಟ್ರಧಾನಿ ದೆಹಲಿಯಲ್ಲಿ ಅತಿಯಾದ ಚಳಿ ಹಿನ್ನೆಲೆಯಲ್ಲಿ 5 ದಿನಗಳ ಕಾಲ ನರ್ಸರಿಯಿಂದ 5 ತರಗತಿವರೆಗಿನ ಮಕ್ಕಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ದಿನದಿಂದ ದಿನಕ್ಕೆ ಚಳಿಯ ತೀವ್ರತೆ ಹೆಚ್ಚುತ್ತಿದ್ದು, ಕೆಲವು ರಾಜ್ಯಗಳಲ್ಲಿ ಜನರು ಮನೆಯಿಂದ ಹೊರಗೆ ಬರೋಕೂ ಕೂಡ ಯೋಚನೆ ಮಾಡುವಂತಾಗಿದೆ.
ಉತ್ತರ ಭಾರತದಲ್ಲಿ ಚಳಿಯ ತೀವ್ರತೆ ಪ್ರತಿದಿನ ಹೆಚ್ಚುತ್ತಿದ್ದು, ಈ ಹಿನ್ನೆಲೆ ಉತ್ತರ ಪ್ರದೇಶ ಮತ್ತು ರಾಜಸ್ಥಾನ ಸೇರಿದಂತೆ ಹಲವು ರಾಜ್ಯ ಸರ್ಕಾರಗಳು ಖಾಸಗಿ ಮತ್ತು ಸರ್ಕಾರಿ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದೆ. ಇದಕ್ಕಾಗಿ ಸ್ಥಳೀಯ ಸರ್ಕಾರ ಆದೇಶವನ್ನೂ ಹೊರಡಿಸಿದೆ. ಇನ್ನು ಹಲವು ಕಡೆಗಳ ಶಾಲೆಗಳಲ್ಲಿ ತರಗತಿಗಳ ಸಮಯವನ್ನು ಬದಲಾಯಿಸಲಾಗಿದೆ.
ಇದಕ್ಕಿಂತ ಒಳ್ಳೆ ಸೇವಿಂಗ್ಸ್ ಮತ್ತೊಂದಿಲ್ಲ..! ದಿನಕ್ಕೆ 50 ರೂಪಾಯಿ ಉಳಿಸಿ 30 ಲಕ್ಷ ನಿಮ್ಮದಾಗಿಸಿಕೊಳ್ಳಿ.!
ತೀವ್ರವಾದ ಚಳಿಯ ವಾತಾವರಣ ಕಳೆದ ಕೆಲವು ದಿನಗಳಿಂದ ಮುಂದುವರಿಯುತ್ತಿದ್ದರಿಂದ ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದಲ್ಲಿ 8 ನೇ ತರಗತಿ ತನಕದ ಶಾಲೆಗಳನ್ನು ಜನವರಿ 14, 2024 ರವರೆಗೆ ಮುಚ್ಚಲು ಆದೇಶಿಸಲಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ಶಾಲೆಗಳನ್ನು ಮುಚ್ಚುವ ನಿರ್ಧಾರವು ರಾಜ್ಯದಲ್ಲಿನ ಖಾಸಗಿ ಮತ್ತು ಸರ್ಕಾರಿ ಶಾಲೆಗಳಿಗೆ ಮಾತ್ರ ಅನ್ವಯಿಸಲಿದೆ.