ಬೆಂಗಳೂರು:- ವರುಣನ ಆರ್ಭಟ ಹಿನ್ನೆಲೆ ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಸಿದ್ದರಾಮಯ್ಯ ಅಧಿಕಾರಿಗಳನ್ನು ಬಲಿಪಶು ಮಾಡ್ತಿದ್ದಾರೆ: ಬಿವೈ ವಿಜಯೇಂದ್ರ !
ಬೆಳಗಾವಿ ಜಿಲ್ಲೆಯ ಖಾನಾಪುರ ಮತ್ತು ಪಶ್ಚಿಮ ಘಟ್ಟ ಭಾಗದಲ್ಲಿ ಭಾರಿ ಮಳೆ ಹಿನ್ನೆಲೆ ಖಾನಾಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ಜು. 19 ಮತ್ತು 20ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜಿಲ್ಲೆಯ ಸಾಗರ, ಸೊರಬ, ಹೊಸನಗರ, ತೀರ್ಥಹಳ್ಳಿ ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ನೀಡಿ ಆಯಾ ತಾಲೂಕಿನ ತಹಶೀಲ್ದಾರ್ಗಳಿಂದ ಆದೇಶಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡ ಮಳೆ ಆರ್ಭಟಿಸಿದ್ದು ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆ ಹಿನ್ನೆಲೆ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್ಆರ್ ಪುರ ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ
ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜಿಗೆ ನಾಳೆ ರಜೆ ಘೋಷಿಸಿ ಉಡುಪಿ ಡಿಸಿ ಡಾ.ವಿದ್ಯಾಕುಮಾರಿ ಆದೇಶಿಸಿದ್ದಾರೆ.