ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ನಡೆಯಲಿರುವ ‘‘ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ’’ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಮಿತ್ ಶಾ ಬೆಂಗಳೂರು ಭೇಟಿ ವೇಳೆ ರಾಜ್ಯ ಬಿಜೆಪಿ ಬೆಳವಣಿಗೆಗಳ ಕುರಿತು ಕರ್ನಾಟಕದ ನಾಯಕರ ಯಾವುದೇ ಭೇಟಿ ನಿಗದಿಯಾಗಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇದೇ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ , ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಚಿವ ಅರವಿಂದ ಲಿಂಬಾವಳಿ ಕೂಡ ವೇದಿಕೆ ಹಂಚಿಕೊಳ್ಳಲಿದ್ದಾರೆ. ಉಡುಪಿ ಪೇಜಾವರ ಅಧೋಕ್ಷಜ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ.