ಕಲಬುರ್ಗಿ:- ಕಲಬುರಗಿಯಲ್ಲಿ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನಪ ಅರೆಸ್ಟ್ ಮಾಡಲಾಗಿದೆ.
ಬಂಧಿತ ಆರೋಪಿಯನ್ನು ಪ್ರಭು ಹಿರೇಮಠ ಎಂದು ಗುರುತಿಸಲಾಗಿದೆ. ಈತ ಅಜ್ಞಾತ ಸ್ಥಳದಿಂದ ವೀಡಿಯೋ ಬಿಡುಗಡೆ ಮಾಡಿದ್ದ. ವಿಡಿಯೋನಲ್ಲಿ ಲಕ್ಷ ಲಕ್ಷ ಹಣ ವಸೂಲಿ ಬಗ್ಗೆ ಬಾಯ್ಬಿಟ್ಟಿದ್ದ. ಕೂಡಲೇ ವೀಡಿಯೋ ಬೆನ್ನುಹತ್ತಿದ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜಿಲ್ಲೆಯಲ್ಲಿ ಹನಿಟ್ರ್ಯಾಪ್ ಗ್ಯಾಂಗ್ ಸಕ್ರಿಯವಾಗಿದ್ದು, ಗ್ಯಾಂಗ್ನ ಸಂತ್ರಸ್ತೆಯೇ ಪೊಲೀಸ್ ಠಾಣೆಗೆ ದೂರು ದಾಖಲಿಸಿರುವ ಘಟನೆ ಶನಿವಾರ ಬೆಳಕಿಗೆ ಬಂದಿತ್ತು.