ಬೆಂಗಳೂರು: ಹನಿ ಟ್ರಾಪ್ ಮಾಡಿ 2.5 ಕೋಟಿ ವಸೂಲಿ ಮಾಡಿದ್ದ ಗ್ಯಾಂಗ್ ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ,. ತಬ್ಸಂ ಬೇಗಂ, ಅಜೀಮ್ ಉದ್ದಿನ್ ಆನಂದ್. ಅಭಿಷೇಕ್ ಬಂಧಿತ ಆರೋಪಿಗಳಾಗಿದ್ದು, ಆರ್ ಟಿ ನಗರ ಜಿಮ್ ನಲ್ಲಿ ಮಹಿಳೆ ತಬಸುಮ್ ಕೇಂದ್ರ ಸರ್ಕಾರಿ ನೌಕರನನ್ನು ಪರಿಚಯ ಮಾಡಿಕೊಂಡಿದ್ದಳು. ನಂತರ ಫೋನ್ ನಂಬರ್ ಪಡೆದು ಚಾಟಿಂಗ್ ಮಾಡಲಾರಂಭಿಸಿದ್ದಾರೆ. ನಂತರ, ಟೀ, ತಿಂಡಿ ಎನ್ನುತ್ತಾ ಸ್ನೇಹ ಬೆಳೆಸಿಕೊಂಡಿದ್ದಾರೆ.
ನಂತರ, ತನ್ನ ಪರಿಚಯದ ಬಗ್ಗೆ ಹೇಳಿಕೊಳ್ಳುತ್ತಾ ತಾನೊಂದು ಮಗುವನ್ನು ದತ್ತು ಪಡೆದು ಸಾಕುತ್ತಿದ್ದು, ಅದಕ್ಕೆ ಒಂದಷ್ಟು ಸಹಾಯ ಮಾಡುವಂತೆ ಕೇಳಿಕೊಂಡಿದ್ದಾರೆ. ಇದೇ ನೆಪವನ್ನಿಟ್ಟುಕೊಂಡು 2021ರಿಂದ ನಿರಂತರವಾಗಿ ಸ್ಬಲ್ಪ ಸ್ವಲ್ಪವೇ ಹಣವನ್ನು ಪಡೆದುಕೊಂಡಿದ್ದಾಳೆ. ತಬಸುಮ್ ಗ್ಯಾಂಗ್ನಿಂದ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದು, ನೌಕರನ ಕೆಲವೊಂದು ಖಾಸಗಿ ಫೋಟೋ, ವಿಡಿಯೋಗಳನ್ನು ಸೆರೆ ಹಿಡಿದುಕೊಂಡಿದ್ದಾರೆ.
ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 10 ಸಾವಿರ ಶಿಕ್ಷಕರ ನೇಮಕಾತಿ!
ನಂತರ ಅವರ ಖಾಸಗಿ ಫೊಟೋಗಳನ್ನು ವಾಟ್ಸಾಪ್ಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಹಂತ ಹಂತವಾಗಿ ಆರೋಪಿಗಳು 2.5 ಕೋಟಿ ರೂ. ಹಣವನ್ನು ವಸೂಲಿ ಮಾಡಿದ್ದಾರೆ. ಇದರ ನಂತರವೂ ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಸಿಸಿಬಿಗೆ ದೂರು ನೀಡಿದ್ದಾರೆ. ಇವರ ದೂರಿನ ಅನ್ವಯ ಪೊಲೀಸರು ಆರೋಪಿಗಳನ್ನು ಬಂಧಿಸಿ, ಪ್ರಕರಣ ದಾಖಲೀಸಿಕೊಂಡಿದ್ದಾರೆ.