ಹಾಂಗ್ ಕಾಂಗ್ನ ಜೋರ್ಡಾನ್ನಲ್ಲಿರುವ ನ್ಯೂ ಲಕ್ಕಿ ಹೌಸ್ ಹೆಸರಿನ ವಸತಿ ಕಟ್ಟಡವೊಂದರಲ್ಲಿ ಇಂದು ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ ಐವರು ಮೃತಪಟ್ಟು 41 ಮಂದಿ ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಮೂವರು ಪುರುಷರು ಮತ್ತು ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಿಗ್ಗೆ 7:53 ಕ್ಕೆ ಬೆಂಕಿ ಬಿದ್ದಿರುವ ಬಗ್ಗೆ ಬಂದ ಮಾಹಿತಿ ನಂತರ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದರು ಎಂದು ಅಕಾರಿಗಳು ತಿಳಿಸಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ಮೊದಲ ಮಹಡಿಯಲ್ಲಿರುವ ಜಿಮ್ನಲ್ಲಿ ಬೆಂಕಿ ಕಾಣಿಸಿಕೊಂಡು ವ್ಯಾಯಾಮ ಮಾಡಲು ಬಂದಿದ್ದ ಅನೇಕರು ಆತಂಕಗೊಂಡು ಅಲ್ಲಿಂದ ಜೀವ ಉಳಿಸಿಕೊಳಲು ಪರದಾಡಿದ್ದಾರೆ.ಸುಮಾರು ಮೂರು ತಾಸಿನ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿಯಲ್ಲಿ ಉಲ್ಲೇಖಿಸಿವೆ.
![](https://ainlivenews.com/wp-content/uploads/2024/01/Ad-Banner-copy-scaled.jpg)