ಗದಗ:- ಕಳೆದ 6 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಾಲ್ವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿ ಇಲ್ಲಿನ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದೆ.
ಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಘೋಷಿಸಿದ ಯೋಗಿ ಆದಿತ್ಯನಾಥ್!
ಪ್ರೀತಿಸಿ ಮದುವೆಯಾಗಿದ್ದ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದ ರಮೇಶ ಮಾದರ ಮತ್ತು ಗಂಗಮ್ಮ ಮಾದರ ಅವರನ್ನು 2019 ರಲ್ಲಿ ಗಂಗಮ್ಮ ಸಂಬಂಧಿಕರು ಚಾಕುವಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದರು.
ಕುಟುಂಬಸ್ಥರ ವಿರೋಧ ನಡುವೆ ಗಂಗಮ್ಮ ಪ್ರೀತಿಸಿ ಅಂತರಜಾತಿ ವಿವಾಹ ಆಗಿದ್ದಕ್ಕೆ ಗಂಗಮ್ಮ ಸಂಬಂಧಿಕರು ಕೊಲೆ ಮಾಡಿದ್ದರು. ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಐಪಿಸಿ ಸೆಕ್ಷನ್ 427, 449, 302, 506(2) ಸೇರಿದಂತೆ ವಿವಿಧ ಸೆಕ್ಷನ್ ಅಡಿಯಲ್ಲಿ ನ್ಯಾಯಾಲಕ್ಕೆ ಪೊಲೀಸರು ದೋಷಾರೋಪಣೆ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಜಿಲ್ಲಾ ನ್ಯಾಯಾಲಯವು ಶಿವಪ್ಪ ರಾಠೋಡ, ರವಿಕುಮಾರ ರಾಠೋಡ, ರಮೇಶ ರಾಠೋಡ ಹಾಗೂ ಸಾರಿಗೆ ಇಲಾಖೆ ಚಾಲಕನಾಗಿರುವ ಪರಶುರಾಮ ರಾಠೋಡ ಮೇಲಿನ ಅಪರಾಧ ಸಾಭಿತಾದ ಹಿನ್ನೆಲೆ ಬುಧವಾರ ಮರಣದಂಡನೆ ವಿಧಿಸಿ ಆದೇಶ ಹೊರಡಿಸಿದೆ.