ಮರಾಠಿ ನಟಿ ಉರ್ಮಿಳಾ ಕಾರು ಹರಿದು ಓರ್ವ ಕಾರ್ಮಿಕ ಸಾವನ್ನಪ್ಪಿದ ಘಟನೆ ಇಲ್ಲಿನ ಕಂಡಿವಲಿಯಲ್ಲಿ ಜರುಗಿದೆ.
ನಟಿ ಉರ್ಮಿಳಾ ಕೊಠಾರೆ ಚಿತ್ರೀಕರಣ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಮೆಟ್ರೋ ರೈಲಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇಬ್ಬರು ಕಾರ್ಮಿಕರಿಗೆ ನಟಿಯ ಕಾರು ಡಿಕ್ಕಿ ಹೊಡೆದಿದೆ.
ಈ ಕುರಿತು ಅಧಿಕಾರಿಗಳು ಮಾತನಾಡಿ, ನಟಿಯ ಕಾರು ಅತಿವೇಗದಲ್ಲಿದ್ದು, ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಪರಿಣಾಮ ಮೆಟ್ರೋ ರೈಲಿನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ. ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ನಟಿ ಉರ್ಮಿಳಾ ಹಾಗೂ ಚಾಲಕ ಕೂಡ ಗಾಯಗೊಂಡಿದ್ದಾರೆ.
ಸದ್ಯ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನೂ ಅಪಘಾತದಲ್ಲಿ ನಟಿಯ ಕಾರಿಗೆ ಭಾರೀ ಹಾನಿಯಾಗಿದೆ.