ನೆಲಮಂಗಲ:- ಇಲ್ಲಿನ ಅಡಕಿಮಾರನಹಳ್ಳಿಯ ಫ್ಲೈಓವರ್ ಮೇಲೆ ಎರಡು ಬೈಕ್ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಹಿಳೆ ಗಂಭೀರ ಗಾಯಗೊಂಡ ಘಟನೆ ಜರುಗಿದೆ.
ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಡ, ಹೆಂಡತಿ ಹಾಗೂ ಮಗು ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಭೀಕರ ಅಪಘಾತದ ಪರಿಣಾಮ ತಂದೆ ಹಾಗೂ ನಾಲ್ಕು ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಿಂದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ
, ಸಂಕ್ರಾಂತಿ ಹಬ್ಬವನ್ನು ಮುಗಿಸಿಕೊಂಡು ತುಮಕೂರು ಮಾರ್ಗವಾಗಿ ಬೆಂಗಳೂರಿಗೆ (Bengaluru) ಬರುವಾಗ ಅಪಘಾತ ಸಂಭವಿಸಿದೆ. ಮೃತರ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭಿಸಿಲ್ಲ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ