ಬೆಂಗಳೂರು:- ನಗರದ ಯಶವಂತಪುರ ಸರ್ಕಲ್ ಬಳಿ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಮುಂಜಾನೆ 3.45ರಲ್ಲಿ ಬೈಕ್ಗೆ ಗುದ್ದಿದ ಕಾರು ಫ್ಲೈಓವರ್ನಿಂದ ಕೆಳಗೆ ಬಿದ್ದು ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು, ಬೈಕ್ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ನಮ್ಮ ಮೆಟ್ರೋದಲ್ಲಿ ಸಂಚರಿಸಿ ಪ್ರಯಾಣಿಕರ ಸಮಸ್ಯೆ ಆಲಿಸಿದ ಕೇಂದ್ರ ಸಂಸದರು!
ಐವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಪೊಲೀಸರು, ಸ್ಥಳೀಯರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆಗೆ ತೆರಳುತ್ತಿದ್ದ ಕಾರು ಬೈಕ್ಗೆ ಡಿಕ್ಕಿ ಹೊಡೆದು ಫ್ಲೈಓವರ್ ಮೇಲೆ ಡಿವೈಡರ್ನಿಂದ ಹಾರಿ ಬಿದ್ದಿದೆ. ತಮಿಳುನಾಡು ನೋಂದಣಿ TN37 DH9484 ಸಂಖ್ಯೆಯ ಕಾರು ಇದಾಗಿದ್ದು ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.