ಕಲಬುರ್ಗಿ:- ಜಿಲ್ಲೆಯ ಆಳಂದ್ ಪಟ್ಟಣದ ಮಿನಿ ಸೌಧದ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ಜರುಗಿದೆ. ಸರ್ಕಾರಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಸ್ಥಳದಲ್ಲೇ ಒಬ್ಬ ಮೃತಪಟ್ಟರೆ, ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬ ಶುಕ್ರವಾರದಂದು ಮೃತಪಟ್ಟಿದ್ದಾರೆ. ಸಿದ್ದಲಿಂಗಯ್ಯ ಹಿರೇಮಠ(39), ಸಂಕೇತ ಮಹಾಂತಯ್ಯಾ ಹಿರೇಮಠ್(8) ಮೃತ ದುರ್ದೈವಿಗಳು.
ಕಲಬುರಗಿಯಿಂದ ಅಳಂದ ಕಡೆ ಹೊರಟಿದ್ದ ಸರ್ಕಾರಿ ಬಸ್ ವೇಗವಾಗಿ ಬಂದು ಬೈಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ನಿಂದ ಕೆಳಗೆ ಬಿದ್ದ ರಭಸಕ್ಕೆ ತಲೆಗೆ ತೀವ್ರ ಪೆಟ್ಟಾಗಿತ್ತು. ಗಂಭೀರ ಗಾಯಗೊಂಡಿದ್ದ ಸಂಕೇತ ಸ್ಥಳದಲ್ಲೇ ಜೀವ ಬಿಟ್ಟರೆ, ಸಿದ್ದಲಿಂಗಯ್ಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಬಸ್ ಚಾಲಕನ ಅಜಾಗರೂಕತೆಯಿಂದಲೇ ಅಪಘಾತ ಸಂಭವಿಸಿ, ಬೈಕ್ ಸವಾರರು ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾ