ಚಿತ್ರದುರ್ಗ: ಭೀಕರ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ಮೈಲಹಳ್ಳಿ ಗ್ರಾಮದ ಬಳಿ ನಡೆದಿದೆ. ರೇಣುಕಾಪುರ ಗ್ರಾಮದ ನಿವಾಸಿ ಶಂಕರನಾಗ್ (38) ಮೃತ ದುರ್ದೈವಿಯಾಗಿದ್ದು, ಟ್ರಾಕ್ಟರ್ ನಲ್ಲಿದ್ದ ಆಂಧ್ರ ಮೂಲದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು,
ಚಳಿಗಾಲದಲ್ಲೇ ಏಕೆ ಜಾಸ್ತಿ ಸೆಕ್ಸ್ ಮಾಡಬೇಕು ಅನಿಸುತ್ತೆ ಗೊತ್ತಾ..? ಇದಕ್ಕೆ ಕಾರಣ ಇಲ್ಲಿದೆ ನೋಡಿ
ಚಳ್ಳಕೆರೆ ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಟ್ರ್ಯಾಕ್ಟರ್ ನಲ್ಲಿ ಕಡಪ ಕಲ್ಲು ತುಂಬಿ ಸಾಗಿಸುತ್ತಿದ್ದಾಗ ಟೈಯರ್ ಬ್ಲಾಸ್ಟ್ ಆಗಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ತಳಕು PSI ಲೋಕೇಶ್ ಭೇಟಿ, ಪರಿಶೀಲನೆ ನಡೆಸಿದ್ದು, ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.