ವಿಜಯಪುರ: ತೋಟಗಾರಿಕೆ ಬೆಳೆಗಳಿಗೆ ವಿಜಯಪುರ ಜಿಲ್ಲೆಯು ಹೆಸರುವಾಸಿಯಾಗಿದೆ. ಈ ಭಾಗದಲ್ಲಿ ತೋಟಗಾರಿಕೆ ಬೆಳೆಗಳಿಗೆ ಇನ್ನಷ್ಟು ಉತ್ತೇಜನ ನೀಡಲು ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು. ಏಷ್ಯಾದಲ್ಲಿಯೇ ಅತಿ ಹೆಚ್ಚು ರೇಷ್ಮೆಗೂಡು ಮಾರಾಟ ವಹಿವಾಟು ನಡೆಸುವ ರಾಮನಗರ ಮತ್ತು,
Coffee Vs Tea: ಬ್ಲ್ಯಾಕ್ ಕಾಫಿ ಮತ್ತು ಬ್ಲ್ಯಾಕ್ ಟೀ ನಡುವಿನ ವ್ಯತ್ಯಾಸಗಳು: ಯಾವುದು ಆರೋಗ್ಯಕರ..?
ಶಿಡ್ಲಘಟ್ಟದಲ್ಲಿರುವ ರೇಷ್ಮೆ ಮಾರುಕಟ್ಟೆಗಳನ್ನು ಮೊದಲನೇ ಹಂತದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಹೈ–ಟೆಕ್ ಮಾರುಕಟ್ಟೆಗಳನ್ನಾಗಿ ಅಭಿವೃದ್ಧಿಪಡಿಸಲು ಈಗಾಗಲೇ ಕ್ರಮವಹಿಸಲಾಗಿದೆ. ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ 250 ಕೋಟಿ ರೂ. ವೆಚ್ಚದಲ್ಲಿ ಎರಡನೇ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.